×
Ad

​ವಿದ್ಯಾಪೋಷಕ್ ವಿದ್ಯಾರ್ಥಿಗಳಿಗೆ ಮನೆ ನಿರ್ಮಾಣಕ್ಕೆ ಶಿಲಾನ್ಯಾಸ

Update: 2021-11-12 22:30 IST

ಉಡುಪಿ, ನ.12: ವಿದ್ಯಾಪೋಷಕ್‌ನ ವಿದ್ಯಾರ್ಥಿಗಳಾದ ಪ್ರಶಾಂತ್ ಕುಮಾರ್ (ಬಿಇ) ಮತ್ತು ಪವಿತ್ರ (ಬಿಎಸ್ಸಿ) ಇವರಿಗೆ ಪೆರ್ಡೂರಿನ ಸನಿಹದಲ್ಲಿ 5 ಸೆಂಟ್ಸ್ ಸ್ಥಳದಲ್ಲಿ ನಿರ್ಮಿಸಲಿರುವ ಮನೆಗೆ ಇದರ ಪ್ರಾಯೋಜಕರಾದ ಪ್ರಸಿದ್ಧ ವಾಸ್ತುತಜ್ಞ ವಿದ್ವಾನ್ ಗುಂಡಿಬೈಲು ಸುಬ್ರಹ್ಮಣ್ಯ ಭಟ್ ಇಂದು ಶಿಲಾನ್ಯಾಸ ನೆರವೇರಿಸಿದರು.

ಇದು ಸಂಸ್ಥೆ ಬಡವಿದ್ಯಾರ್ಥಿಗಳಿಗೆ ನಿರ್ಮಿಸಿ ಕೊಡಲಿರುವ 22ನೇ ಮನೆ ಯಾಗಿದೆ. ಈ ಸಂದರ್ಭದಲ್ಲಿ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್, ಉಪಾಧ್ಯಕ್ಷ ಎಸ್.ವಿ.ಭಟ್, ವಿ.ಜಿ.ಶೆಟ್ಟಿ, ಕಾರ್ಯದರ್ಶಿ ಮುರಳಿ ಕಡೆಕಾರ್, ವಿದ್ಯಾಪೋಷಕ್ ಕೋಶಾಧಿಕಾರಿ ಪ್ರೊ.ಕೆ.ಸದಾಶಿವ ರಾವ್ ಸ್ಥಳೀಯ ರಾದ ಹರಿನಾರಾಯಣ ಭಂಡಿ ಹಾಗೂ ರಾಘವೇಂದ್ರ ಅಡಿಗ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News