ಜಿ.ಎಂ.ಶುಗರ್ಸ್ ಕಂಪೆನಿಯಿಂದ ಅಕ್ರಮ ಕಲ್ಲುಗಣಿಗಾರಿಕೆ: ಆರೋಪ

Update: 2021-11-12 17:14 GMT
ಸುದ್ದಿಗೋಷ್ಠಿಯಲ್ಲಿ ಎಸ್.ಆರ್.ಹಿರೇಮಠ್  

ದಾವಣಗೆರೆ, ನ.12: ಸಂಸದ ಜಿ.ಎಂ.ಸಿದ್ದೇಶ್ವರ್ ಅವರ ಒಡೆತನದ ಜಿ.ಎಂ.ಶುಗರ್ಸ್ ಕಂಪೆನಿಯಿಂದ ಹಾವೇರಿ ಜಿಲ್ಲೆಯ ರಟ್ಟೀಹಳ್ಳಿ ತಾಲೂಕು ಚಟ್ನಿಹಳ್ಳಿ ಹಾಗೂ ಇತರ ಗ್ರಾಮಗಳಲ್ಲಿ ಅಕ್ರಮವಾಗಿ ಕಲ್ಲುಗಣಿಗಾರಿಕೆ ನಡೆಸಲಾಗುತ್ತಿದೆ ಎನ್ನುವುದು ಮೇಲ್ನೋಟಕ್ಕೆ ಕಂಡು ಬರುತ್ತದೆ ಎಂದು ಆರೋಪಿಸಿರುವ ಸಮಾಜ ಪರಿವರ್ತನಾ ಸಮುದಾಯದ ಮುಖಂಡ ಎಸ್.ಆರ್.ಹಿರೇಮಠ್ ಅವರು, ಕೂಡಲೇ ಸರಕಾರ ಗಣಿಗಾರಿಕೆ ನಿಲ್ಲಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾವೇರಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಅಕ್ರಮವಾಗಿ ಗಣಿಗಾರಿಕೆ ನಡೆಸಿದ್ದರ ಬಗ್ಗೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯ ಸದಸ್ಯ ಕಾರ್ಯದರ್ಶಿ ಭೇಟಿ ನೀಡಿ ವರದಿ ಸಲ್ಲಿಸಿದ್ದಾರೆ. ಅವರಿಂದ ಅಕ್ರಮ ಅವ್ಯವಹಾರಗಳು ಮತ್ತು ಕ್ರಿಮಿನಲ್ ಚಟುವಟಿಕೆಗಳು ನಡೆದಿದ್ದು, ಮೇಲ್ನೋಟಕ್ಕೆ ಕಂಡು ಬರುತ್ತದೆ. ಈ ಕುರಿತು ಸೂಕ್ತ ಕ್ರಮ ಕೈಗೊಳ್ಳುವಂತೆ ಹಾಗೂ ಗಂಭೀರ ಪ್ರಕರಣವೆಂದು ಪರಿಗಣಿಸುವಂತೆ ಸೂಚನೆ ನೀಡಿದ್ದಾರೆ ಎಂದು ಮಾಹಿತಿ ನೀಡಿದರು.

ಈ ಕುರಿತಂತೆ ಸಮಾಜ ಪರಿವರ್ತನ ಸಮುದಾಯ ಸಂಘಟನೆ ಸೇರಿದಂತೆ ಇತರ ಸಂಘಟನೆಗಳು ಗಣಿ ಮತ್ತು ಭೂವಿಜ್ಞಾನ ಇಲಾಖೆಯವರಿಗೆ ಹಲವಾರು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಕಾರಣ ತಕ್ಷಣವಾಗಿ ಜಿಎಂಸಿದ್ದೇಶ್ವರ್ ವಿರುದ್ಧ ಗಂಭೀರ ಅಕ್ರಮ ಗಣಿಗಾರಿಕೆ ವಿರುದ್ಧ ಆಧಾರದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಬೇಕು. ಅಲ್ಲದೆ ಗಣಿಗಾರಿಕೆ ನಿಲ್ಲಿಸಬೇಕು. ಕ್ರಷರ್ ಕಲ್ಲು ಕಲ್ಲು ಪುಡಿ ಮಾಡುವ ಮಷಿನ್‌ಗಳನ್ನು ಸ್ಥಗಿತಗೊಳಿಸಬೇಕೆಂದು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಎಂಸಿ ಹಾವೇರಿ, ಎನ್.ಸಿ.ದೊಡಮನಿ, ಅನೀಸ್ ಪಾಷಾ, ಬಲ್ಲೂರು ರವಿಕುಮಾರ್ ಇತರರಿದ್ದರು.


 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News