×
Ad

ಸ್ವಚ್ಛ ಸರ್ವೇಕ್ಷಣ್ 2021 ಸ್ವರ್ಧೆಯಲ್ಲಿ ಬೆಂಗಳೂರಿಗೆ ಪ್ರಶಸ್ತಿ

Update: 2021-11-13 00:43 IST

ಬೆಂಗಳೂರು ನ.12: ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ನಿಮಿತ್ತ ಕೇಂದ್ರ ಸರಕಾರ ಏರ್ಪಡಿಸಿದ್ದ ಸ್ವಚ್ಛ ಸರ್ವೇಕ್ಷಣ್ 2021 'ಸಫಾಯಿ ಮಿತ್ರ ಸುರಕ್ಷಾ ಸ್ಪರ್ಧೆ'ಯಲ್ಲಿ ಬೆಂಗಳೂರು ನಗರಕ್ಕೆ ಪ್ರಶಸ್ತಿ ಲಭಿಸಿದೆ. ಇದೇ ನ.20ರಂದು ನವದೆಹಲಿಯ ವಿಜ್ಞಾನ ಭವನದಲ್ಲಿ ಏರ್ಪಡಿಸಿರುವ ಸ್ವಚ್ಛ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸ್ವಚ್ಛ ಸರ್ವೇಕ್ಷಣ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. 

ಸ್ವಚ್ಛ ಸರ್ವೇಕ್ಷಣ್ ಪ್ರಶಸ್ತಿ ನಗರಕ್ಕೆ ಲಭಿಸಲು ನಗರದ ನಾಗರಿಕರು, ಪಾಲಿಕೆ ಸ್ವಚ್ಛತಾ ಸಿಬ್ಬಂದಿ, ಅಧಿಕಾರಿಗಳು ಸೇರಿದಂತೆ ಮಾರ್ಗದರ್ಶನ ನೀಡಿದ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿ ವರ್ಗದ ಶ್ರಮವಿದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಕೃತಜ್ಞತೆ ಅರ್ಪಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News