×
Ad

ನಿಗದಿತ ಗುಂಪಿನ ಬದಲು ಬೇರೆ ಗುಂಪಿನ ರಕ್ತ ನೀಡಿದ ಆಸ್ಪತ್ರೆ; ಮಹಿಳೆ ಮೃತ್ಯು

Update: 2021-11-13 10:49 IST

ರೂರ್ಕೆಲಾ: ಒಡಿಶಾದ ಸುಂದರ್‌ಗಢ ಜಿಲ್ಲೆಯ ಆಸ್ಪತ್ರೆಯೊಂದರಲ್ಲಿ 25 ವರ್ಷದ ಮಹಿಳೆಯೊಬ್ಬರಿಗೆ ತಪ್ಪು ಗುಂಪಿನ ರಕ್ತವನ್ನು ನೀಡಿದ್ದರಿಂದ ಸಾವನ್ನಪ್ಪಿದ್ದಾರೆ.

ಕುಟ್ರಾ ಬ್ಲಾಕ್‌ನ ಬುಡಕಟಾ ಗ್ರಾಮದ ನಿವಾಸಿ ಸರೋಜಿನಿ ಕಾಕು ಅವರನ್ನು ಗುರುವಾರ ಮಧ್ಯಾಹ್ನ ರೂರ್ಕೆಲಾ ಸರಕಾರಿ ಆಸ್ಪತ್ರೆಗೆ (ಆರ್‌ಜಿಹೆಚ್) ದಾಖಲಿಸಲಾಗಿದೆ. ರೋಗಿಯು ರಕ್ತಹೀನತೆಯಿಂದ ಬಳಲುತ್ತಿದ್ದರು ಹಾಗೂ  ಮಹಿಳೆಗೆ ರಕ್ತ ವರ್ಗಾವಣೆ ಮಾಡಲಾಗಿತ್ತು ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.

ಮಹಿಳೆಗೆ ತಪ್ಪು ರಕ್ತ ನೀಡಲಾಗಿದ್ದು, ಇದರಿಂದ ಮಹಿಳೆ ಸಾವನ್ನಪ್ಪಿದ್ದಾಳೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಆಕೆಯ ರಕ್ತದ ಗುಂಪು ಒ ಪಾಸಿಟಿವ್. ಆದರೆ ಆಕೆಗೆ ಬಿ ಪಾಸಿಟಿವ್ ನೀಡಲಾಗಿದೆ ಎಂದು ಸಂಬಂಧಿಯೊಬ್ಬರು ಸುದ್ದಿಗಾರರಿಗೆ ತಿಳಿಸಿದರು.

ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆಗಾಗಿ ಮೃತದೇಹವನ್ನು ಸಂರಕ್ಷಿಸಲಾಗಿದೆ ಎಂದು ಕುತ್ರಾ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಬಿ.ಕೆ. ಬಿಹಾರಿ ತಿಳಿಸಿದ್ದಾರೆ.

ಈ ಕುರಿತು ತನಿಖೆ ನಡೆಸಲು ಆರ್‌ಜಿಎಚ್ ತನಿಖಾ ಸಮಿತಿಯನ್ನು ರಚಿಸಿದ್ದು, ಯಾರಾದರೂ ತಪ್ಪಿತಸ್ಥರಾಗಿದ್ದರೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News