×
Ad

ಭತ್ತದ ಕೃಷಿಗೆ ಪ್ರೋತ್ಸಾಹ ನೀಡುವ ಕಾರ್ಯ ಶ್ಲಾಘನೀಯ: ಜಿಲ್ಲಾಧಿಕಾರಿ ಡಾ.ರಾಜೇಂದ್ರ

Update: 2021-11-13 13:06 IST

ಬಂಟ್ವಾಳ, ನ.13: ಜಿಲ್ಲೆಯಲ್ಲಿ ಪತ್ರಕರ್ತರು ಭತ್ತದ ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಜನರಿಗೆ ಪ್ರೋತ್ಸಾಹ ನೀಡುತ್ತಿರುವುದು ಶ್ಲಾಘನೀಯ ಎಂದು ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಅವರು ಇಂದು ವಿಟ್ಲ ಮಿತ್ತಳಿಕೆಯ ತಿಮಾರು ಗದ್ದೆಯಲ್ಲಿ ಭತ್ತದ ಕೃಷಿ ಜಾಗೃತಿ ಕಾರ್ಯಕ್ರಮದ ಅಂಗವಾಗಿ ದ.ಕ. ವಾರ್ತಾ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆ, ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಮಿತ್ತಳಿಕೆ ಕುಟುಂಬದ ಸಹಯೋಗದೊಂದಿಗೆ ಭತ್ತದ ಪೈರು ಕೊಯ್ಲು ಕಾರ್ಯಕ್ರಮಕ್ಕೆ ಚಾಲನೆ  ನೀಡಿ ಮಾತನಾಡುತ್ತಿದ್ದರು.

ಗ್ರಾಮೀಣ ಭಾಗದಲ್ಲಿ ಕಡಿಮೆಯಾಗುತ್ತಿರುವ ಭತ್ತದ ಕೃಷಿಗೆ ಈ ಬಾರಿ ಹಡೀಲು ಭೂಮಿ ಕೃಷಿಯ ಮೂಲಕ ಉತ್ತಮ ಪ್ರತಿಕ್ರಿಯೆ ದೊರೆಯುತ್ತಿದೆ.ಈ ನಿಟ್ಟಿನಲ್ಲಿ ಸಾಮೂಹಿಕ ಪ್ರಯತ್ನ ಅಗತ್ಯ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

 ಕಾರ್ಯಕ್ರಮದಲ್ಲಿ  ಮಿತ್ತಳಿಕೆ ಕುಟುಂಬದ ಹಿರಿಯರಾದ ಸಂಕಪ್ಪ ಶೇಖ, ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಕಾರ್ಯದರ್ಶಿ ಇಬ್ರಾಹೀಂ ಅಡ್ಕಸ್ಥಳ, ಬಂಟ್ವಾಳ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಶಾಂತ್ ಪೂಂಜಾಲಕಟ್ಟೆ, ಮಿತ್ತಳಿಕೆ ಕುಟುಂಬದ ಸದಸ್ಯರಾದ ಸರಸ್ವತಿ ಆಳ್ವ, ದಯಾನಂದ ಆಳ್ವ, ಸೂರ್ಯನಾಥ ಆಳ್ವ, ವಿಜಯಶಂಕರ ಆಳ್ವ, ಸೂರ್ಯವಂಶ ಫೌಂಡೇಶನ್ ಅಧ್ಯಕ್ಷ ಗೋವರ್ಧನ ರಾವ್, ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರು ಮತ್ತು ಪದಾಧಿಕಾರಿಗಳಾದ ಪುಷ್ಪರಾಜ್ ಬಿ.ಎನ್., ಜಿತೇಂದ್ರ ಕುಂದೇಶ್ವರ, ಸತ್ಯವತಿ ಕೆ., ಹರೀಶ್ ಮೋಟುಕಾನ, ದಯಾ ಕುಕ್ಕಾಜೆ, ಸುಖ್ಪಾಲ್ ಪೊಳಲಿ ಮೊದಲಾದವರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಭತ್ತದ ಕೃಷಿ ಕಾರ್ಮಿಕರಿಗೆ ಜಿಲ್ಲಾಧಿಕಾರಿ ಸಾಂಕೇತಿಕವಾಗಿ ಅಕ್ಕಿ ವಿತರಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News