ಅಪಘಾತದ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲು ನೆರವಾದ ರಾಜ್ಯ ಗೃಹಸಚಿವ
Update: 2021-11-13 15:34 IST
ಶಿವಮೊಗ್ಗ, ನ.13:ಅಪಘಾತದಲ್ಲಿ ಗಾಯಗೊಂಡಿದ್ದವರಿಗೆ ಗೃಹಸಚಿವ ಆರಗ ಜ್ಣಾನೇಂದ್ರ ಮತ್ತು ಅವರ ಬೆಂಗಾವಲು ಸಿಬ್ಬಂದಿ ನೆರವಾಗುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಮಂಡಗದ್ದೆ ಕಾಡಿನಲ್ಲಿ ಅಪಘಾತ ಸಂಭವಿಸಿದ್ದು, ಅಪಘಾತಕ್ಕೆ ಕಾರಣ ತಿಳಿದು ಬಂದಿಲ್ಲ.ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಗೃಹಸಚಿವ ಅರಗ ಜ್ಣಾನೇಂದ್ರ ಅವರು ಶಿವಮೊಗ್ಗದಲ್ಲಿ ನಡೆಯುತ್ತಿರುವ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದರು. ಈ ವೇಳೆ ರಸ್ತೆಯಲ್ಲಿದ್ದ ಗಾಯಾಳುಗಳನ್ನು ಆರೈಕೆ ಮಾಡಿ, ಎಸ್ಕಾರ್ಟ್ ವಾಹನದಲ್ಲಿ ಶಿವಮೊಗ್ಗದ ಆಸ್ಪತ್ರೆಗೆ ಕರೆತಂದು ದಾಖಲಿಸಿದ್ದಾರೆ.
ಇನ್ನು ಘಟನೆಗೆ ಸಂಬಂಧ ಗಾಯಾಳುಗಳಿಗೆ ಕೂಡಲೇ ಚಿಕಿತ್ಸೆಗೆ ವ್ಯವಸ್ಥೆ ಮಾಡುವಂತೆ ಆಸ್ಪತ್ರೆ ಸಿಬ್ಬಂದಿಗೂ ಗೃಹಸಚಿವ ಅರಗ ಜ್ಣಾನೇಂದ್ರ ಸೂಚನೆ ನೀಡಿದರು.ಗಾಯಾಳುಗಳಿಬ್ಬರು ತೀರ್ಥಹಳ್ಳಿ ಮೂಲದವರು ಎಂದು ತಿಳಿದುಬಂದಿದೆ.