×
Ad

ಕೋಡಿಕಲ್: ನಾಗಬನಕ್ಕೆ ಹಾನಿ; ಸ್ಥಳೀಯರಿಂದ ಪ್ರತಿಭಟನೆ

Update: 2021-11-13 15:38 IST

ಮಂಗಳೂರು, ನ.13: ನಗರದ ಕೋಡಿಕಲ್‌ ಬಳಿಯ ನಾಗಬನಕ್ಕೆ ದುಷ್ಕರ್ಮಿಗಳು ಹಾನಿ ಎಸಗಿದ ಘಟನೆ ಶನಿವಾರ ಬೆಳಕಿಗೆ ಬಂದಿದ್ದು, ಇದನ್ನು ಖಂಡಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ.

ದುಷ್ಕರ್ಮಿಗಳು ನಾಗನ ಕಟ್ಟೆಯಿಂದ ಒಂದು ಕಲ್ಲನ್ನು ಎಸೆದಿರುವುದು ಬೆಳಕಿಗೆ ಬಂದಿದೆ. ಇದನ್ನು ಕಂಡ ಸ್ಥಳೀಯರು ಆಕ್ರೋಶಗೊಂಡಿದ್ದು, ದುಷ್ಕರ್ಮಿಗಳ ಪತ್ತೆಗೆ ಒತ್ತಾಯಿಸಿದ್ದಾರೆ.

ಹಾನಿಗೊಳಗಾದ ಪ್ರದೇಶಕ್ಕೆ ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯ ಶಾಸಕ ಡಾ.ಭರತ್ ಶೆಟ್ಟಿ ಕೂಡ ಭೇಟಿ ನೀಡಿದ್ದು, ದುಷ್ಕರ್ಮಿಗಳ ಬಂಧನಕ್ಕೆ ಒತ್ತಾಯಿಸಿದ್ದಾರೆ.

ಕೆಲವು ದಿನಗಳ ಹಿಂದೆ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಕೂಳೂರಿನ ನಾಗನ ಕಟ್ಟೆಗೆ ದುಷ್ಕರ್ಮಿಗಳು ಹಾನಿ ಎಸಗಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News