×
Ad

ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಸಮಾಜ ಕಲ್ಯಾಣ ಕಾರ್ಯಕ್ರಮ

Update: 2021-11-13 15:51 IST

ಮಂಗಳೂರು, ನ.13: ಜಿಲ್ಲೆಯಲ್ಲಿರುವ ಬಂಟರ ಸಂಘಗಳು ಜಾಗತಿಕ ಬಂಟರ ಸಂಘಗಳ ಒಕ್ಕೂಟಕ್ಕೆ ಶಕ್ತಿ ತುಂಬುವ ಕೆಲಸ ಮಾಡಿದಾಗ ಬಡತನದಲ್ಲಿರುವ ಕುಟುಂಬಗಳಿಗೆ ಮತ್ತಷ್ಟು ಸಹಾಯ ಮಾಡಲು ಸಾಧ್ಯವಾಗುತ್ತದೆ. ಜೀವನದಲ್ಲಿ ಕಷ್ಟ, ಕಾಯಿಲೆ ಸಹಜ. ಇದ್ಯಾವುದಕ್ಕೂ ಎದೆಗುಂದದೆ ಜೀವನದಲ್ಲಿ ಮುನ್ನುಗ್ಗಿ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಹೇಳಿದ್ದಾರೆ.

ನಗರದ ಬಂಟ್ಸ್ ಹಾಸ್ಟೆಲ್‌ನಲ್ಲಿರುವ ಅಮೃತೋತ್ಸವ ಕಟ್ಟಡದ ಸಭಾಂಗಣದಲ್ಲಿ ಜರುಗಿದ ಸಮಾಜ ಕಲ್ಯಾಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಫಲಾನುಭವಿಗಳಿಗೆ ಚೆಕ್ ವಿತರಿಸಿ ಅವರು ಮಾತನಾಡಿದರು.

ಇದೇ ಸಂದರ್ಭ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪಡೆದ ಅಂತಾರಾಷ್ಟ್ರೀಯ ಕ್ರೀಡಾಪಟು ರೋಹಿತ್ ಕಟೀಲ್, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ ಪತ್ರಕರ್ತರಾದ ವಿದ್ಯಾಧರ ಶೆಟ್ಟಿ ಹಾಗೂ ಅಶೋಕ ಶೆಟ್ಟಿ ಬ್ರಹ್ಮರಕೂಟ್ಲು, ಥಾಣೆ ಬಂಟರ ಸಂಘದ ಅಧ್ಯಕ್ಷ ವೇಣುಗೋಪಾಲ್ ಶೆಟ್ಟಿ ಮತ್ತು ಕಾರ್ಪೊರೇಟರ್ ಪ್ರವೀಣ್‌ಚಂದ್ರ ಆಳ್ವರನ್ನು ಸನ್ಮಾನಿಸಿಲಾಯಿತು.

ಒಕ್ಕೂಟದ ಸಮಾಜದ ಕಲ್ಯಾಣ ಯೋಜನೆಯಡಿ ವೈದ್ಯಕೀಯ, ಹೆಣ್ಮಕ್ಕಳ ವಿವಾಹ ಸಹಾಯ, ವಸತಿ ಸಹಾಯಹಸ್ತ ಹಾಗೂ ಇನ್ನಿತರ ಆರ್ಥಿಕ ಕಷ್ಟದಲ್ಲಿರುವ 30 ಫಲಾನುಭವಿಗಳಿಗೆ 5 ಲಕ್ಷ ರೂ.ಗೂ ಮಿಕ್ಕಿದ ಸಹಾಯಧನದ ಚೆಕ್ ವಿತರಿಸಲಾಯಿತು.

ಒಕ್ಕೂಟದ ಆಡಳಿತಾಧಿಕಾರಿ ಸಚ್ಚಿದಾನಂದ ಹೆಗ್ಡೆ ಕೊಳ್ಕೆಬೈಲ್ ಹಾಗೂ ವಿವಿಧ ಘಟಕಗಳ ಪ್ರಮುಖರು ಉಪಸ್ಥಿತರಿದ್ದರು. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ ಸ್ವಾಗತಿಸಿದರು. ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಇಂದ್ರಾಳಿ ಜಯಕಾರ ಶೆಟ್ಟಿ ಪ್ರಾಸ್ತಾವಿಕ ಮಾತುಗಳ್ನಾಡಿದರು. ಶರತ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಸಿಂಧ್ಯಾ ಶೆಟ್ಟಿ ಪ್ರಾರ್ಥಿಸಿದರು. ಒಕ್ಕೂಟದ ಜೊತೆ ಕಾರ್ಯದರ್ಶಿ ಸಂಕಬೈಲ್ ಸತೀಶ್ ಅಡಪ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News