ವಿಧಾನ ಪರಿಷತ್ ಚುನಾವಣೆ: ಕರಡು ಮತದಾರರ ಪಟ್ಟಿ ಪ್ರಕಟ
ಬೆಂಗಳೂರು, ನ.13: ರಾಜ್ಯದ 20 ಸ್ಥಳೀಯ ಸಂಸ್ಥೆಗಳ ಕ್ಷೇತ್ರಗಳಿಂದ ವಿಧಾನಪರಿಷತ್ತಿನ 25 ಸದಸ್ಯ ಸ್ಥಾನಗಳಿಗೆ ಡಿ.10ರಂದು ನಡೆಯುವ ಮತದಾನಕ್ಕೆ ಸಂಬಂಧಿಸಿದಂತೆ ಚುನಾವಣಾ ನೋಂದಣಾಧಿಕಾರಿಗಳು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದಾರೆ ಎಂದು ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ತಿಳಿಸಿದ್ದಾರೆ.
ಈ 20 ಸ್ಥಳೀಯ ಸಂಸ್ಥೆಗಳ ಕ್ಷೇತ್ರಗಳಲ್ಲಿ ಒಟ್ಟು 98,846 ಮತದಾರರಿದ್ದು, ಈ ಪೈಕಿ 47,368 ಪುರುಷ ಮತದಾರರು, 51,474 ಮಹಿಳಾ ಮತದಾರರು ಹಾಗೂ 3 ಇತರ ವರ್ಗದ ಮತದಾರರಿದ್ದಾರೆ. 6,073 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಕರಡು ಮತದಾರರ ಪಟ್ಟಿಯು ಎಲ್ಲ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿ ಹಾಗೂ ಅವರ ವೆಬ್‍ಸೈಟ್ ಮತ್ತು ಎಲ್ಲ ಪಂಚಾಯತ್ ರಾಜ್ ಸಂಸ್ಥೆಗಳು, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಲಭ್ಯವಿದೆ. ಮತದಾರರ ಕರಡು ಪಟ್ಟಿಗೆ ಸಂಬಂಧಿಸಿದಂತೆ ಏನಾದರೂ ಆಕ್ಷೇಪಣೆಗಳಿದ್ದಲ್ಲಿ ಏಳು ದಿನಗಳಲ್ಲಿ ಸಂಬಂಧ ಪಟ್ಟ ಚುನಾವಣಾಧಿಕಾರಿಗಳಿಗೆ ಸಲ್ಲಿಸಬಹುದಾಗಿದೆ ಎಂದು ಮನೋಜ್ ಕುಮಾರ್ ಮೀನಾ ತಿಳಿಸಿದ್ದಾರೆ.
ಬೀದರ್ ಕ್ಷೇತ್ರದಲ್ಲಿ 192 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು 3453 ಮತದಾರರಿದ್ದಾರೆ. ಕಲಬುರಗಿ(ಗುಲ್ಬರ್ಗ) ಕ್ಷೇತ್ರದ ಕಲಬುರಗಿಯಲ್ಲಿ 265 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, 4536 ಮತದಾರರಿದ್ದಾರೆ, ಯಾದಗಿರಿ ಜಿಲ್ಲೆಯಲ್ಲಿ 126 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, 2454 ಮತದಾರರಿದ್ದಾ. ವಿಜಯಪುರ(ಬಿಜಾಪುರ) ಕ್ಷೇತ್ರದ ಬಿಜಾಪುರ ಜಿಲ್ಲೆಯಲ್ಲಿ 208 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, 2060 ಮತದಾರರಿದ್ದಾರೆ, ಬಾಗಲಕೋಟೆ ಜಿಲ್ಲೆಯಲ್ಲಿ 203 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, 3447 ಮತದಾರರಿದ್ದಾರೆ.
ಬೆಳಗಾವಿ ಕ್ಷೇತ್ರದಲ್ಲಿ 511 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, 8871 ಮತದಾರರಿದ್ದಾರೆ, ಉತ್ತರ ಕನ್ನಡ ಕ್ಷೇತ್ರದಲ್ಲಿ 238 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, 2916 ಮತದಾರರಿದ್ದಾರೆ. ಧಾರವಾಡ ಕ್ಷೇತ್ರದ ಧಾರವಾಡ ಜಿಲ್ಲೆಯಲ್ಲಿ 144 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, 2164 ಮತದಾರರಿದ್ದಾರೆ. ಹಾವೇರಿ ಜಿಲ್ಲೆಯಲ್ಲಿ 230 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, 3369 ಮತದಾರರಿದ್ದಾರೆ. ಗದಗ ಜಿಲ್ಲೆಯಲ್ಲಿ 130 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, 1969 ಮತದಾರರಿದ್ದಾರೆ.
ರಾಯಚೂರು ಕ್ಷೇತ್ರದ ರಾಯಚೂರು ಜಿಲ್ಲೆಯಲ್ಲಿ 182 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, 3627 ಮತದಾರರಿದ್ದಾರೆ. ಕೊಪ್ಪಳ ಜಿಲ್ಲೆಯಲ್ಲಿ 157 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, 2876 ಮತದಾರರಿದ್ದಾರೆ. ಬಳ್ಳಾರಿ ಕ್ಷೇತ್ರದ ಬಳ್ಳಾರಿ ಜಿಲ್ಲೆಯಲ್ಲಿ 247 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, 4660 ಮತದಾರರಿದ್ದಾರೆ. ಚಿತ್ರದುರ್ಗ ಕ್ಷೇತ್ರದ ಚಿತ್ರದುರ್ಗ ಜಿಲ್ಲೆಯಲ್ಲಿ 195 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, 3575 ಮತದಾರರಿದ್ದಾರೆ. ದಾವಣಗೆರೆ ಜಿಲ್ಲೆಯಲ್ಲಿ(ಕೇವಲ ಹರಿಹರ, ಜಗಳೂರು ಮತ್ತು ದಾವಣಗೆರೆ ತಾಲೂಕುಗಳು) ದಲ್ಲಿ 89 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, 1490 ಮತದಾರರಿದ್ದಾರೆ.
ಶಿವಮೊಗ್ಗ ಕ್ಷೇತ್ರದ ಶಿವಮೊಗ್ಗ ಜಿಲ್ಲೆಯಲ್ಲಿ 257 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, 2885 ಮತದಾರರಿದ್ದಾರೆ ಹಾಗೂ ದಾವಣಗೆರೆ(ಕೇವಲ ಚನ್ನಗಿರಿ, ನ್ಯಾಮತಿ ಮತ್ತು ಹೊನ್ನಾಳಿ ತಾಲೂಕುಗಳು)ಯಲ್ಲಿ 108 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, 1294 ಮತದಾರರಿದ್ದಾರೆ. ದಕ್ಷಿಣ ಕನ್ನಡ ಕ್ಷೇತ್ರದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 231 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, 3529 ಮತದಾರರಿದ್ದಾರೆ. ಉಡುಪಿ ಜಿಲ್ಲೆಯಲ್ಲಿ 158 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, 2514 ಮತದಾರರಿದ್ದಾರೆ.
ಚಿಕ್ಕಮಗಳೂರು ಕ್ಷೇತ್ರದಲ್ಲಿ 231 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, 2429 ಮತದಾರರಿದ್ದಾರೆ. ಹಾಸನ ಕ್ಷೇತ್ರದಲ್ಲಿ 258 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, 3611 ಮತದಾರರಿದ್ದಾರೆ. ತುಮಕೂರು ಕ್ಷೇತ್ರದಲ್ಲಿ 338 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, 5552 ಮತದಾರರಿದ್ದಾರೆ. ಮಂಡ್ಯ ಕ್ಷೇತ್ರದಲ್ಲಿ 240 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, 4033 ಮತದಾರರಿದ್ದಾರೆ. ಬೆಂಗಳೂರು ನಗರ ಕ್ಷೇತ್ರದಲ್ಲಿ 86 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, 2059 ಮತದಾರರಿದ್ದಾರೆ.
ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 101 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, 1836 ಮತದಾರರಿದ್ದಾರೆ. ರಾಮನಗರ ಜಿಲ್ಲೆಯಲ್ಲಿ 126 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, 2063 ಮತದಾರರಿದ್ದಾರೆ. ಕೋಲಾರ ಕ್ಷೇತ್ರದ ಕೋಲಾರ ಜಿಲ್ಲೆಯಲ್ಲಿ 158 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, 2929 ಮತದಾರರಿದ್ದಾರೆ. ಚಿಕ್ಕಬಳ್ಳಾರ ಜಿಲ್ಲೆಯಲ್ಲಿ 163 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, 2675 ಮತದಾರರಿದ್ದಾರೆ.
ಕೊಡಗು ಜಿಲ್ಲೆಯ ಕೊಡಗು ಕ್ಷೇತ್ರದಲ್ಲಿ 108 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, 1328 ಮತದಾರರಿದ್ದಾರೆ. ಮೈಸೂರು ಕ್ಷೇತ್ರದ ಮೈಸೂರು ಜಿಲ್ಲೆಯಲ್ಲಿ 259 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, 4494 ಮತದಾರರಿದ್ದಾರೆ ಹಾಗೂ ಚಾಮರಾಜನಗರ ಜಿಲ್ಲೆಯಲ್ಲಿ 134 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, 2270 ಮತದಾರರಿದ್ದಾರೆ ಎಂದು ಮನೋಜ್ ಕುಮಾರ್ ಮೀನಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.