×
Ad

ಬಿಟ್ ಕಾಯಿನ್ ಹಗರಣ: ವೈರಲ್ ಆಡಿಯೊ ತನಿಖೆ ಚುರುಕು

Update: 2021-11-13 20:34 IST
photo: PTI

ಬೆಂಗಳೂರು, ನ.13: ಬಹುಕೋಟಿ ಮೌಲ್ಯದ ಬಿಟ್ ಕಾಯಿನ್ ಪ್ರಕರಣ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಧ್ವನಿಸುರುಳಿ(ಆಡಿಯೊ) ಕುರಿತು ಸಿಸಿಬಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

ಬಿಟ್ ಕಾಯಿನ್ ಬಹುಕೋಟಿ ಹಗರಣದ ಸಂಬಂಧ ಪೊಲೀಸ್ ಅಧಿಕಾರಿಗಳು ನಡೆಸಿದ ಸಂಭಾಷೆಣೆಯ ಆಡಿಯೊ ವೈರಲ್ ಆಗಿರುವ ಹಿನ್ನೆಲೆಯಲ್ಲಿ ಇಬ್ಬರನ್ನು ಸಿಸಿಬಿ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. 

ಸಿಸಿಬಿ ಹೆಡ್‍ಕಾನ್‍ಸ್ಟೇಬಲ್ ಹಾಗೂ ನಿವೃತ್ತ ಸಬ್ ಇನ್‍ಸ್ಪೆಕ್ಟರ್‍ವೊಬ್ಬರನ್ನು ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದ್ದು, ಯಾರ ಜತೆ ಮತ್ತು ಯಾವಾಗ ಮಾತನಾಡಿರುವ ಆಡಿಯೊ ಅದು, ಯಾರಿಂದ ಬಹಿರಂಗವಾಯಿತು ಸೇರಿ ಹಲವು ಎಂಬ ಪ್ರಶ್ನೆಗಳನ್ನು ಇಬ್ಬರಿಗೂ ಸಿಸಿಬಿ ಪೊಲೀಸರು ಕೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News