×
Ad

19ರಿಂದ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಾಥಮಿಕ ಸದಸ್ಯತ್ವ ನೊಂದಣಿ ಅಭಿಯಾನ: ಉಡುಪಿ ಜಿಲ್ಲಾ ಕಾಂಗ್ರೆಸ್ ಸಭೆ

Update: 2021-11-13 21:38 IST

ಉಡುಪಿ, ನ.13: ಜಿಲ್ಲೆಯ ಎಲ್ಲಾ ಬ್ಲಾಕ್ ಅಧ್ಯಕ್ಷರು ತಮ್ಮ ತಮ್ಮ ಬ್ಲಾಕ್ ವ್ಯಾಪ್ತಿಯಲ್ಲಿ ಪಕ್ಷದ ಪ್ರಾಥಮಿಕ ಸದಸ್ಯತ್ವ ಅಭಿಯಾನವನ್ನು ನ.19ರಿಂದ ಪ್ರಾರಂಭಿಸಬೇಕು. ಪ್ರಸ್ತುತ ಸನ್ನಿವೇಶದಲ್ಲಿ ಯುವಕರು ಪಕ್ಷದ ಬಗ್ಗೆ ಆರ್ಕಷಿತ ರಾಗುತಿದ್ದು, ಯುವಕರನ್ನು ಹೆಚ್ಚಿನ ಆಧ್ಯತೆ ನೀಡಿ ಪಕ್ಷಕ್ಕೆ ಸೇರ್ಪಡೆಗೊಳಿಸಬೇಕಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆದ ಜಿಲ್ಲಾ ಕಾಂಗ್ರೆಸ್ ಸಭೆಯಲ್ಲಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಹೇಳಿದ್ದಾರೆ.

ಗ್ರಾಮೀಣ ಸಮಿತಿಗಳನ್ನು ರಚಿಸುವುದರೊಂದಿಗೆ ಬೂತು ಮಟ್ಟದ ಸಂಘಟನೆ ಪಕ್ಷದ ಬಲವರ್ಧನೆಗೆ ಸಹಕಾರಿಯಾಗಲಿದ್ದು ಸದಸ್ಯತ್ವ ನೊಂದಾವಣೆಯೊಂದಿಗೆ ಸಂಘಟನೆಗೂ ಆದ್ಯತೆ ನೀಡಬೇಕಾಗಿದೆ ಎಂದರು.

ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಮಾತನಾಡಿ ದೇಶವು ಹಿಂದೆಂದೂ ಕಾಣದ ಬೆಲೆ ಏರಿಕೆಯ ಬಿಸಿಯಲ್ಲಿ ಬೇಯುತ್ತಿದೆ. ಇದೇ ಕಾರಣಕ್ಕೆ ಜನರ ಆಕ್ರೋಶ ಕಟ್ಟೆಯೊಡೆಯುತ್ತಿದೆ ಎಂಬ ಸೂಚನೆ 13 ರಾಜ್ಯಗಳಲ್ಲಿ ನಡೆದ ಉಪಚುನಾವಣೆ ಫಲಿತಾಂಶದಿಂದ ಗೊತ್ತಾಗಿದ್ದು, ಈ ಹಿನ್ನಲೆಯಲ್ಲಿಯೇ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಅಲ್ಪ ತಗ್ಗಿಸಿ ಇದನ್ನೇ ಸಾಧನೆಯೆಂದು ಸರಕಾರ ಬಿಂಬಿಸುತ್ತಿರುವುದು ವಿಪರ್ಯಾಸ ಎಂದರು.

ಅವಿಭಜಿತ ಜಿಲ್ಲೆಗಳಲ್ಲಿ ಪೈರು ಕಟಾವು ಆಗುವಾಗಲೇ ರೈತರಿಗೆ ಬೆಂಬಲ ಬೆಲೆ ದೊರಕಬೇಕು. ಹಾಗೆಯೇ ಭತ್ತದ ಯಾಂತ್ರಿಕ ಕಟಾವಿಗೆ ಜಿಲ್ಲಾ ಆಡಳಿತ ಗಂಟೆಗೆ 1800 ರೂ. ನಿಗದಿಪಡಿಸಿದ್ದು, ಖಾಸಗಿಯವರು ಅಧಿಕ ಮೊತ್ತವನ್ನು ವಸೂಲಿ ಮಾಡುತ್ತಿರುವುದನ್ನು ಜಿಲ್ಲಾಡಳಿತದ ಮನಕ್ಕೆ ತರಬೇಕಾಗಿದೆ ಎಂದರು.

ವೇದಿಕೆಯಲ್ಲಿ ಮಾಜಿ ಶಾಸಕ ಗೋಪಾಲ ಪೂಜಾರಿ, ಪಕ್ಷದ ಮುಖಂಡರಾದ ರಾಜಶೇಖರ ಕೋಟ್ಯಾನ್, ಕೆಪಿಸಿಸಿ ಪ್ಯಾನಲಿಸ್ಟ್ ವೆರೋನಿಕಾ ಕರ್ನೇಲಿಯೋ ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ಕೆ. ಅಣ್ಣಯ್ಯ ಸೇರಿಗಾರ್ ಸ್ವಾಗತಿಸಿ ಕೆಪಿಸಿಸಿ ಸಂಯೋಜಕಿ ಡಾ. ಸುನೀತಾ ಶೆಟ್ಟಿ ವಂದಿಸಿದರು. ಜಿಲ್ಲಾ ವಕ್ತಾರ ಭಾಸ್ಕರ್ ರಾವ್ ಕಿದಿಯೂರು ಕಾರ್ಯಕ್ರಮ ನಿರ್ವಹಿಸಿದರು.

ಸಭೆಯಲ್ಲಿ ಬ್ಲಾಕ್ ಅಧ್ಯಕ್ಷರಾದ ಮಂಜುನಾಥ ಪೂಜಾರಿ, ನವೀನ್‌ಚಂದ್ರ ಸುವರ್ಣ, ಶಂಕರ್ ಕುಂದರ್, ಹೆಚ್.ಹರಿಪ್ರಸಾದ್ ಶೆಟ್ಟಿ, ಪ್ರದೀಪ್ ಕುಮಾರ್ ಶೆಟ್ಟಿ, ಎಸ್.ಮದನ್ ಕುಮಾರ್, ದಿನಕರ ಹೇರೂರು, ರಮೇಶ್ ಕಾಂಚನ್, ಮುಖಂಡರಾದ ಮಲ್ಯಾಡಿ ಶಿವರಾಮ ಶೆಟ್ಟಿ, ಬಿ. ಹಿರಿಯಣ್ಣ, ರಾಜು ಪೂಜಾರಿ, ನೀರೆ ಕೃಷ್ಣ ಶಟ್ಟಿ, ಬಿ.ನರಸಿಂಹ ಮೂರ್ತಿ, ಬಿ.ಭುಜಂಗ ಶೆಟ್ಟಿ, ಹರೀಶ್ ಕಿಣಿ, ಹಬೀಬ್ ಅಲಿ, ಚಂದ್ರಶೇಖರ್ ಶೆಟ್ಟಿ, ದೇವಕಿ ಸಣ್ಣಯ್ಯ, ಸರಸು ಡಿ. ಬಂಗೇರ, ಕಿಶನ್ ಹೆಗ್ಡೆ ಕೊಳ್ಕೆಬೈಲ್, ಕಾಪು ದಿವಾಕರ ಶೆಟ್ಟಿ, ಬಿಪಿನ್‌ಚಂದ್ರ ಪಾಲ್ ನಕ್ರೆ, ಪ್ರಖ್ಯಾತ್ ಶೆಟ್ಟಿ, ಬಿ. ಕುಶಲ್ ಶೆಟ್ಟಿ, ಕೀರ್ತಿ ಶೆಟ್ಟಿ, ಯತೀಶ್ ಕರ್ಕೇರ, ಗೀತಾ ವಾಗ್ಳೆ, ರೋಶನಿ ಒಲಿವರ್, ಉದ್ಯಾವರ ನಾಗೇಶ್ ಕುಮಾರ್, ಅಬ್ದುಲ್ ಅಜೀಜ್ ಹೆಜಮಾಡಿ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News