ಮೂಡಿಗೆರೆ ಬಸ್ ನಿಲ್ದಾಣದಲ್ಲಿ 2 ಗುಂಪುಗಳ ನಡುವೆ ಹೊಡೆದಾಟ: ಓರ್ವನಿಗೆ ಗಾಯ
Update: 2021-11-14 11:41 IST
ಚಿಕ್ಕಮಗಳೂರು, ನ.14: ಮೂಡಿಗೆರೆ ಸರ್ಕಾರಿ ಬಸ್ ನಿಲ್ದಾಣದೊಳಗೆ ಎರಡು ಗುಂಪುಗಳ ನಡುವೆ ಹೊಡೆದಾಟ ನಡೆದಿದ್ದು, ಓರ್ವ ಯುವಕನಿಗೆ ತಲೆಗೆ ಗಂಭೀರ ಗಾಯವಾಗಿರುವುದು ವರದಿಯಾಗಿದೆ.
ಗಾಯಾಳುವನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಯುವಕರ ಹೊಡೆದಾಟದ ಹಿನ್ನೆಲೆಯಲ್ಲಿ ಬಸ್ ನಿಲ್ದಾಣದಲ್ಲಿ ಕೆಲ ಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.