ಭಾರಿ ಮಳೆಯ ಹಿನ್ನೆಲೆ; ನ.15ರಂದು ಕಾಸರಗೋಡು ಜಿಲ್ಲೆಯ ಶಾಲೆಗಳಿಗೆ ರಜೆ
Update: 2021-11-14 19:06 IST
ಕಾಸರಗೋಡು: ಭಾರಿ ಮಳೆ ಹಿನ್ನೆಲೆಯಲ್ಲಿ ನ.15ರಂದು ಕಾಸರಗೋಡು ಜಿಲ್ಲೆಯ ಶಾಲೆಗಳಿಗೆ ಜಿಲ್ಲಾಧಿಕಾರಿಭಂಡಾರಿ ಸ್ವಾಗತ್ ರಜೆ ಘೋಷಿಸಿದ್ದಾರೆ. ಆದರೆ ಕಾಲೇಜುಗಳಿಗೆ ರಜೆ ಅನ್ವಯಿಸುವುದಿಲ್ಲ ಎಂದು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ರವಿವಾರ ಮಧ್ಯಾಹ್ನದಿಂದ ಭಾರಿ ಮಳೆ ಸುರಿಯುತ್ತಿದೆ. ಜಿಲ್ಲೆಯಲ್ಲಿ ಸೋಮವಾರ ಭಾರಿ ಮಳೆಗೆ ಸಾಧ್ಯತೆ ಇರುವುದರಿಂದ ಆರಂಜ್ ಅಲರ್ಟ್ ಘೋಷಿಸಲಾಗಿದೆ. ಕೆಲ ಪ್ರದೇಶಗಳಲ್ಲಿ ಎರಡು ದಿನಗಳಿಂದ ಮಳೆ ಸುರಿಯುತ್ತಿದ್ದು, ಹಲವೆಡೆ ಭೂಕುಸಿತದ ಭೀತಿ ತಲೆದೋರಿದೆ. ಮಳೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವಂತೆ ಮುನ್ನೆಚ್ಚರಿಕೆ ನೀಡಲಾಗಿದೆ. ಎಲ್ಲಾ ತಾಲೂಕು ಕೇಂದ್ರಗಳಲ್ಲಿ 24 ಗಂಟೆಯೂ ಕಾರ್ಯಾಚರಿಸುವ ಕಂಟ್ರೋಲ್ ರೂಂ ಗಳನ್ನು ತೆರೆಯಲಾಗಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.