×
Ad

ವಿಶ್ವಕಪ್ ಫೈನಲ್: ಟಾಸ್ ಗೆದ್ದ ಆಸ್ಟ್ರೇಲಿಯ ಫೀಲ್ಡಿಂಗ್ ಆಯ್ಕೆ

Update: 2021-11-14 19:15 IST

ದುಬೈ: ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಅತ್ಯಂತ ಮಹತ್ವದ ಟಾಸ್ ಗೆದ್ದುಕೊಂಡಿರುವ ಆಸ್ಟ್ರೇಲಿಯ ಕ್ರಿಕೆಟ್ ತಂಡ ಫೀಲ್ಡಿಂಗ್ ಆಯ್ದುಕೊಂಡಿದೆ.

ನ್ಯೂಝಿಲ್ಯಾಂಡ್ ತಂಡ ಆಸ್ಟ್ರೇಲಿಯ ವಿರುದ್ಧದ 50 ಓವರ್‌ಗಳ ವಿಶ್ವಕಪ್ ಹಾಗೂ ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡಿರುವ 17 ಪಂದ್ಯಗಳ ಪೈಕಿ ಕೇವಲ 3ರಲ್ಲಿ ಗೆಲುವು ಸಾಧಿಸಿದ್ದು, 12 ಪಂದ್ಯಗಳಲ್ಲಿ ಸೋಲುಂಡಿದೆ. ಆದರೆ ಟ್ವೆಂಟಿ-20 ವಿಶ್ವಕಪ್‌ನಲ್ಲಿ 1 ಪಂದ್ಯವನ್ನು ಆಡಿದ್ದು, ಒಂದರಲ್ಲಿ ಗೆಲುವು ದಾಖಲಿಸಿದೆ.

ಆಸ್ಟ್ರೇಲಿಯ ತಂಡವು ಸೆಮಿ ಫೈನಲ್‌ನಲ್ಲಿ ಆಡಿರುವ 11ರ ಬಳಗವನ್ನೇ ಕಣಕ್ಕಿಳಿಸಿದರೆ, ನ್ಯೂಝಿಲ್ಯಾಂಡ್ ತಂಡದಲ್ಲಿ ಏಕೈಕ ಬದಲಾವಣೆ ಮಾಡಲಾಗಿದ್ದು, ಗಾಯಗೊಂಡಿರುವ ಕಾನ್ವೇ ಬದಲಿಗೆ ಟಿಮ್ ಸೆಫರ್ಟ್ ಆಡುವ ಬಳಗವನ್ನು ಸೇರಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News