ರಾಜ್ಯದಲ್ಲಿ ರವಿವಾರ 236 ಮಂದಿಗೆ ಕೊರೋನ ದೃಢ, ಇಬ್ಬರು ಮೃತ್ಯು

Update: 2021-11-14 14:06 GMT

ಬೆಂಗಳೂರು, ನ. 14: ರಾಜ್ಯದಲ್ಲಿ ರವಿವಾರ 236 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. ಇಬ್ಬರು ಸೋಂಕಿಗೆ ಬಲಿಯಾಗಿದ್ದು, 206 ಜನರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 29,91,850ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 38,145ಕ್ಕೆ ತಲುಪಿದೆ.     
ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 7,997ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.

ಇಬ್ಬರು ಸೋಂಕಿತರು ಬಲಿ: ಬೆಂಗಳೂರು ನಗರದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. 

ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 236 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಳ್ಳಾರಿ 3, ಬೆಳಗಾವಿ 2, ಬೆಂಗಳೂರು ಗ್ರಾಮಾಂತರ 9, ಬೆಂಗಳೂರು ನಗರ 152, ಚಾಮರಾಜನಗರ 1, ದಕ್ಷಿಣ ಕನ್ನಡ 11, ದಾವಣಗೆರೆ 1, ಧಾರವಾಡ 2, ಹಾಸನ 11, ಕೊಡಗು 4, ಕೋಲಾರ 7, ಮಂಡ್ಯ 1, ಮೈಸೂರು 10, ಶಿವಮೊಗ್ಗ 5, ತುಮಕೂರು 5, ಉಡುಪಿ 6, ಉತ್ತರ ಕನ್ನಡ ಜಿಲ್ಲೆಯಲ್ಲಿ 6 ಪ್ರಕರಣ ಪತ್ತೆಯಾಗಿವೆ.  

ರಾಜಧಾನಿಯಲ್ಲಿ 152 ಜನರಿಗೆ ಕೊರೋನ ದೃಢ

ರಾಜಧಾನಿಯಲ್ಲಿ ರವಿವಾರದಂದು 152 ಜನರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಇಬ್ಬರು ಸೋಂಕಿಗೆ ಬಲಿಯಾಗಿದ್ದಾರೆ.

ನಗರದಲ್ಲಿ ಇಲ್ಲಿಯವರೆಗೆ ಒಟ್ಟು 12,53,975  ಕೊರೋನ ಸೋಂಕಿತರು ದೃಢಪಟ್ಟಿದ್ದು, ಒಟ್ಟು 16,312 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಒಟ್ಟು 12,31,062 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳಲ್ಲಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News