×
Ad

ವಿಶ್ವಕಪ್ ಫೈನಲ್ ಪಂದ್ಯದ ಗೆಲುವಿಗೆ ಆಸ್ಟ್ರೇಲಿಯಕ್ಕೆ 173 ರನ್ ಗುರಿ ನೀಡಿದ ನ್ಯೂಝಿಲ್ಯಾಂಡ್

Update: 2021-11-14 21:14 IST
photo: AFP

   ದುಬೈ, ನ.14: ನಾಯಕ ಕೇನ್ ವಿಲಿಯಮ್ಸನ್(85 ರನ್, 48 ಎಸೆತ, 10 ಬೌಂಡರಿ, 3 ಸಿಕ್ಸರ್) ಅವರ ಆಕರ್ಷಕ ಬ್ಯಾಟಿಂಗ್ ನೆರವಿನಿಂದ ನ್ಯೂಝಿಲ್ಯಾಂಡ್ ತಂಡವು ಟ್ವೆಂಟಿ-20 ವಿಶ್ವಕಪ್ ಫೈನಲ್‌ನಲ್ಲಿ ಆಸ್ಟ್ರೇಲಿಯದ ಗೆಲುವಿಗೆ 173 ರನ್ ಗುರಿ ನೀಡಿದೆ.

ರವಿವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ್ದ ನ್ಯೂಝಿಲ್ಯಾಂಡ್ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 172 ರನ್ ಗಳಿಸಿತು.

ಇನಿಂಗ್ಸ್ ಆರಂಭಿಸಿದ ಮಾರ್ಟಿನ್ ಗಪ್ಟಿಲ್(28) ಹಾಗೂ ಮಿಚೆಲ್(11)ಮೊದಲ ವಿಕೆಟ್‌ಗೆ 28 ರನ್ ಗಳಿಸಿದರು. ಗಪ್ಟಿಲ್‌ರೊಂದಿಗೆ 2ನೇ ವಿಕೆಟ್‌ಗೆ 48 ರನ್ ಜೊತೆಯಾಟ ನಡೆಸಿದ ವಿಲಿಯಮ್ಸನ್ ಆ ನಂತರ ಫಿಲಿಪ್ಸ್ ಜೊತೆಗೆ 3ನೇ ವಿಕೆಟ್‌ನಲ್ಲಿ 68 ರನ್ ಸೇರಿಸಿದರು.

ಆಸ್ಟ್ರೇಲಿಯ ಬೌಲಿಂಗ್ ವಿಭಾಗದಲ್ಲಿ ಜೋಶ್ ಹೇಝಲ್‌ವುಡ್(3-16)ಯಶಸ್ವಿ ಬೌಲರ್ ಎನಿಸಿಕೊಂಡರು. ಸ್ಪಿನ್ನರ್ ಆಡಮ್ ಝಾಂಪ(1-26) ಒಂದು ವಿಕೆಟ್ ಪಡೆದರು. ನೀಶಮ್ ಔಟಾಗದೆ 13 ರನ್ ಗಳಿಸಿದರು.

ವಿಲಿಯಮ್ಸನ್ ಟ್ವೆಂಟಿ-20 ವಿಶ್ವಕಪ್ ಫೈನಲ್‌ನಲ್ಲಿ ಅರ್ಧಶತಕ ಸಿಡಿಸಿದ ಎರಡನೇ ನಾಯಕ ಎನಿಸಿಕೊಂಡರು. ಶ್ರೀಲಂಕಾದ ಕುಮಾರ ಸಂಗಕ್ಕರ 2009ರಲ್ಲಿ ಪಾಕಿಸ್ತಾನದ ವಿರುದ್ಧ ಔಟಾಗದೆ 64 ರನ್ ಗಳಿಸಿದ್ದರು.
 
ವಿಲಿಯಮ್ಸನ್ 16ನೇ ಓವರ್‌ನಲ್ಲಿ ಮಿಚೆಲ್ ಸ್ಟಾರ್ಕ್ ಬೌಲಿಂಗ್‌ನಲ್ಲಿ 4 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ ಒಟ್ಟು 22 ರನ್ ಗಳಿಸಿದರು. ಸ್ಟಾರ್ಕ್ ವಿಶ್ವಕಪ್ ಫೈನಲ್‌ನಲ್ಲಿ ಒಂದೇ ಓವರ್‌ನಲ್ಲಿ ಗರಿಷ್ಠ ರನ್ ಬಿಟ್ಟುಕೊಟ್ಟು ದುಬಾರಿ ಬೌಲರ್ ಎನಿಸಿಕೊಂಡರು. ವಿಲಿಯಮ್ಸನ್ 18ನೇ ಓವರ್‌ನಲ್ಲಿ ಹೇಝಲ್‌ವುಡ್‌ಗೆ ವಿಕೆಟ್ ಒಪ್ಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News