×
Ad

ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದು ನಮ್ಮೆಲ್ಲರ ಹೊಣೆ: ನ್ಯಾ.ಮುಸ್ತಫಾ. ಹುಸೇನ್‌

Update: 2021-11-14 22:46 IST

ಶಿವಮೊಗ್ಗ, ನ.14: ಶಿಕ್ಷಣ ಎಲ್ಲ ಮಕ್ಕಳ ಹಕ್ಕು. ಯಾವ ಮಕ್ಕಳನ್ನೂ ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ. ಶಾಲೆ ಬಿಟ್ಟ ಮಕ್ಕಳನ್ನು ಗುರುತಿಸಿ ಶಾಲೆಗೆ ಸೇರಿಸಿ ಕನಿಷ್ಟ ಪದವಿವರೆಗೆ ಶಿಕ್ಷಣ ನೀಡಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮುಸ್ತಫಾ ಹುಸೇನ್‌. ಎಂ.ಎಸ್ ಹೇಳಿದರು.

ರಾಜ್ಯ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿ.ಪಂ, ಜಿಲ್ಲಾ ನ್ಯಾಯವಾಧಿಗಳ ಸಂಘ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಹಯೋಗದಲ್ಲಿ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಲಾಗಿದ್ದ ಮಕ್ಕಳ ದಿನಾಚರಣೆ ಹಾಗೂ ಸ್ವಾತಂತ್ರ್ಯ ಅಮೃತ ಮಹೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವುದು ಪೋಷಕರ ಕರ್ತವ್ಯವಾಗಿದೆ. ಪ್ರತಿಷ್ಟಿತ ಶಾಲೆಗಳಲ್ಲೇ ಓದಬೇಕು ಅನ್ನೋದು ತಪ್ಪು. ಸಾಧನೆಗೈದ ಬಹುತೇಕ ಮಹನೀಯರು ಸರ್ಕಾರಿ ಶಾಲೆಯಲ್ಲಿ ಓದಿದ್ದಾರೆ. ನಾನೂ ಕೂಡ ಸರ್ಕಾರಿ ಶಾಲೆಯಲ್ಲೇ ಓದಿದ್ದು. ಸರ್ಕಾರಿ ಶಾಲೆಯಲ್ಲಿ ಉತ್ತಮ ಶಿಕ್ಷಕರು ಮತ್ತು ಉತ್ತಮ ಶಿಕ್ಷಣ ಲಭ್ಯವಾಗುತ್ತಿದ್ದು, ಸರ್ಕಾರಿ ಶಾಲೆ ಎಂಬ ಕೀಳರಿಮೆ ಬಿಟ್ಟು ದಾಖಲಾಗಬೇಕು. ಪೋಷಕರು ತಮ್ಮ ಮಕ್ಕಳಿಗೆ ಕನಿಷ್ಠ ಪದವಿವರೆಗೆ ಶಿಕ್ಷಣ ಕೊಡಿಸಬೇಕು. ಶಿಕ್ಷಣ ಹೆಚ್ಚಾದಾಗ ಕಾನೂನು ಉಲ್ಲಂಘನೆ ಕಡಿಮೆ ಆಗುತ್ತದೆ ಎಂದರು.

   ದೇಶದಲ್ಲಿ ಶೇ. 17 ರಷ್ಟು ವಿದ್ಯಾರ್ಥಿಗಳು ಎಸ್ಎಸ್ಎಲ್ ಸಿ ಹೊತ್ತಿಗೆ ಡ್ರಾಪ್ ಔಟ್ ಆಗುತ್ತಾರೆ. ಕೆಲವರು ವಿವಿಧ ಉದ್ಯೋಗ ಮಾಡಿದರೆ ಮತ್ತೆ ಕಲವರು ವಿವಿಧ ದುರಭ್ಯಾಸಗಳಿಗೆ ಬಲಿಯಾಗುತ್ತಿದ್ದಾರೆ. ಇಂತಹ ಶಾಲೆ ಬಿಟ್ಟ ವಿದ್ಯಾರ್ಥಿಗಳನ್ನು ಮುಖ್ಯವಾಹಿನಿಗೆ ತರುವುದು ಇಲಾಖೆಗಳು, ಪೋಷಕರು ಸೇರಿದಂತೆ ಇಡೀ ಸಮಾಜದ ಜವಾಬ್ದಾರಿಯಾಗಿದೆ.

ಜೊತೆಗೆ  ಮಕ್ಕಳಲ್ಲಿ ಕಾನೂನು  ಅರಿವು ಮೂಡಿಸುವುದು ಕೂಡ ಅಷ್ಟೇ ಪ್ರಮುಖ ಕೆಲಸವಾಗಿದೆ. ಮಕ್ಕಳನ್ನು ಯಾವ ರೀತಿ ಪೋಷಿಸಿ, ಸಂಸ್ಕಾರ ನೀಡುತ್ತೇವೋ ಅದೇ ರೀತಿಯ ಪರಿಣಾಮ ಸಮಾಜ ಮೇಲೆ ಆಗುತ್ತದೆ. ಆದ ಕಾರಣ ಉತ್ತಮ ಶಿಕ್ಷಣ ಮತ್ತು ಸಂಸ್ಕಾರ ನೀಡಿದಲ್ಲಿ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದರು.

ಜಿಲ್ಲಾ ಕಾನೂನು ಸೇವೆ ಗಳ ಪ್ರಾಧಿಕಾರದ ವತಿಯಿಂದ ದಿ 2/10/2021 ರಿಂದ 13/11/2021 ರವರೆಗೆ ಮಹಿಳೆಯರು, ಮಕ್ಕಳು, ಅಂಗವಿಕಲರು, ತೃತೀಯ ಲಿಂಗಿಗಳು, ಕಾರ್ಮಿಕರು ಸೇರಿದಂತೆ ಹಳ್ಳಿ ಹಳ್ಳಿಗಳಲ್ಲಿ ಕಾನೂನು ಅರಿವು ಮೂಡಿಸಲು  ಜಾಗೃತಿ. ಜಾಥಾ, ಶಿಬಿರ, ಪ್ರಚಾರ ಸೇರಿದಂತೆ 2021 ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಉಚಿತ ಕಾನೂನು ಅರವು ಮತ್ತು ನೆರವು ಯೋಜನೆಯ ಸದುಪಯೋಗವನ್ನು ಎಲ್ಲರೂ ಪಡೆಯಬೇಕು ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಗಳು ವಿವಿಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿದರು.
ಜಿ.ಪಂ.ಸಿಇಓ ಎಂ.ಎಲ್.ವೈಶಾಲಿ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯೆ ಹಾಗೂ ಮನೋವೈದ್ಯೆ ಡಾ.ಪ್ರೀತಿ ಶಾನುಭಾಗ್, ಮಕ್ಕಳ ಕಲ್ಯಾಣ ಸಮಿತಿ ಯ ರೇಖಾ.ಜಿ.ಎಂ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ದೇವೇಂದ್ರಪ್ಪ ಮಾತನಾಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News