ನಿಷೇಧಾಜ್ಞೆ ನಡುವೆ ಪ್ರತಿಭಟನೆ: ಶನಿವಾರಸಂತೆಯಲ್ಲಿ ಸಂಘಪರಿವಾರದ ಕಾರ್ಯಕರ್ತರು ವಶಕ್ಕೆ
Update: 2021-11-15 12:11 IST
ಮಡಿಕೇರಿ ನ.15 : ಶನಿವಾರಸಂತೆಯಲ್ಲಿ ನಿಷೇಧಾಜ್ಞೆ ನಡುವೆ ಪ್ರತಿಭಟನೆ ನಡೆಸಲು ಮುಂದಾದ ಸಂಘಪರಿವಾರದ ನಾಯಕರು ಹಾಗೂ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.
ಇತ್ತೀಚೆಗೆ ನಡೆದ ಗುಂಪು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಬೇಕೆಂದು ಒತ್ತಾಯಿಸಿ ಶನಿವಾರಸಂತೆ ಬಂದ್ ಗೆ ಕರೆ ನೀಡಿದ್ದ ಸಂಘಪರಿವಾರದ ಕಾರ್ಯಕರ್ತರು ಇಂದು ಪ್ರತಿಭಟನೆಯ ತಯಾರಿಯಲ್ಲಿದ್ದರು. ಈ ಹಿನ್ನೆಲೆಯಲ್ಲಿ ಶನಿವಾರಸಂತೆಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿತ್ತು. ಇದನ್ನು ಉಲ್ಲಂಘಿಸಿ ಪ್ರತಿಭಟನೆ ನಡೆಸಲು ಮುಂದಾದವರನ್ನು ಪೊಲೀಸರು ವಶಕ್ಕೆ ಪಡೆದರು.
ಪೊಲೀಸರ ವಿರುದ್ಧ ಘೋಷಣೆಗಳನ್ನು ಕೂಗಿದ ಸಂಘಪರಿವಾರದ ಕಾರ್ಯುಕರ್ತರು ನಿಷೇಧಾಜ್ಞೆ ಜಾರಿ ಮಾಡಿರುವುದಕ್ಕೆ ಖಂಡನೆ ವ್ಯಕ್ತಪಡಿಸಿದರು.