×
Ad

ಹೆಚ್ಚುವರಿ ಬಿಜೆಪಿ ಮತ ಇತರರ ಪಾಲಾಗದಂತೆ ಎಚ್ಚರ: ಸುರೇಶ್ ನಾಯಕ್ ಕುಯಿಲಾಡಿ

Update: 2021-11-15 19:50 IST

ಉಡುಪಿ : ವಿಧಾನ ಪರಿಷತ್ ಚುನಾವಣೆಯ ಉಡುಪಿ ಜಿಲ್ಲೆಯ ನ್ನೊಳಗೊಂಡ ದ.ಕ. ಜಿಲ್ಲಾ ಕ್ಷೇತದ ಬಿಜೆಪಿ ಅಭ್ಯರ್ಥಿ ಯಾಗಿ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಅಂತಿಮಗೊಳಿಸಲಾಗಿದೆ. ಎರಡನೇ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುವ ಬಗ್ಗೆ ಈವರೆಗೆ ತೀರ್ಮಾನ ಆಗಿಲ್ಲ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಸುರೇಶ್ ನಾಯಕ್ ಕುಯಿಲಾಡಿ ತಿಳಿಸಿದ್ದಾರೆ.

ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದ.ಕ. ಜಿಲ್ಲೆಯಲ್ಲಿ 2136 ಹಾಗೂ ಉಡುಪಿ ಜಿಲ್ಲೆಯಲ್ಲಿ 1572 ಸೇರಿದಂತೆ ಒಟ್ಟು 3708 ಬಿಜೆಪಿ ಬೆಂಬಲಿತ ಮತಗಳಿದ್ದು, ಇದರಲ್ಲಿ ನಮ್ಮ ಅಭ್ಯರ್ಥಿ ಗೆಲವು ಸಾಧಿಸಲು 2200 ಮತಗಳು ಬೇಕಾಗುತ್ತವೆ. ಎರಡನೇ ಅಭ್ಯರ್ಥಿ ಗೆಲ್ಲಲು 300 ಮತಗಳ ಕೊರತೆ ಆಗುತ್ತದೆ. ಆದರೆ ಯಾವುದೇ ಕಾರಣಕ್ಕೂ ನಮ್ಮ ಹೆಚ್ಚುವರಿ ಮತಗಳನ್ನು ಬೇರೆಯವರ ಪಾಲಾಗದಂತೆ ಎಚ್ಚರ ವಹಿಸಲಾಗುವುದು ಎಂದರು.

ಚುನಾವಣೆ ಪೂರ್ವಭಾವಿಯಾಗಿ ಜಿಲ್ಲಾ ಬಿಜೆಪಿ ಆಶ್ರಯದಲ್ಲಿ ನ.19ರಂದು ಬೆಳಗ್ಗೆ 11ಗಂಟೆಗೆ ಜನಸ್ವರಾಜ್ ಸಮಾವೇಶವನ್ನು ಉಡುಪಿ ಪುರಭವನದಲ್ಲಿ ಆಯೋಜಿಸಲಾಗಿದೆ. ಇದರಲ್ಲಿ ರಾಜ್ಯ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾ ಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಚಿವರಾದ ಸುನೀಲ್ ಕುಮಾರ್, ಕೋಟ ಶ್ರೀನಿವಾಸ ಪೂಜಾರಿ ಮೊದಲಾದವರು ಭಾಗವಹಿಸಲಿರುವರು.

ಪತ್ರಿಕಾಗೋಷ್ಠಿಯಲ್ಲಿ ಸಮಾವೇಶದ ಸಂಚಾಲಕ ಮನೋಹರ್ ಕಲ್ಮಾಡಿ, ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ ಕಟಪಾಡಿ, ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ ಹಿರೇಬೆಟ್ಟು, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್ ಆತ್ರಾಡಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News