×
Ad

ಮಂಗಳೂರು ವಿ.ವಿ : ಉದ್ಯೋಗಮೇಳ ಮುಂದೂಡಿಕೆ

Update: 2021-11-15 20:02 IST
ಪ್ರಾತಿನಿಧಿಕ ಚಿತ್ರ

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ, ವಿಶ್ವವಿದ್ಯಾನಿಲಯ ತರಬೇತಿ ಮತ್ತು ಉದ್ಯೋಗ ಕೋಶ ಹಾಗೂ ಉದ್ಯೋಗ ಮಾಹಿತಿ ಮಾರ್ಗದರ್ಶನ ಕೇಂದ್ರದ ವತಿಯಿಂದ ನಗರದ ಹಂಪನಕಟ್ಟೆಯ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ನ.16  ಮತ್ತು 17ರಂದು ನಡೆಯಲಿದ್ದ ಉದ್ಯೋಗ ಮೇಳವನ್ನು ಚುನಾವಣಾ ನೀತಿ ಸಂಹಿತೆಯಿಂದಾಗಿ ಮುಂದೂಡಲಾಗಿದೆ.

ಮುಂದಿನ ದಿನಾಂಕವನ್ನು ಶೀಘ್ರದಲ್ಲೇ ತಿಳಿಸಲಾಗುವುದು ಎಂದು ವಿಶ್ವವಿದ್ಯಾನಿಲಯದ ಪ್ರಕಟಣೆ ತಿಳಿಸಿದೆ.

ಮಂಗಳೂರು, ನ.15: ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ಇಲ್ಲಿ ನ.16-17ರಂದು ಆಯೋಜಿಸಲಾಗಿದ್ದ ಉದ್ಯೋಗ ಮೇಳವನ್ನು ಜಿಲ್ಲಾಧಿಕಾರಿಗಳ ಹಾಗೂ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳ ಸೂಚನೆಯ ಮೇರೆಗೆ “ಚುನಾವಣಾ ನೀತಿ ಸಂಹಿತೆ” ಜಾರಿಯಲ್ಲಿರುವುದರಿಂದ ಕಾರ್ಯಕ್ರಮವನ್ನು ತಕ್ಷಣದಿಂದ ರದ್ದು ಪಡಿಸಲಾಗಿದೆ.

ಆದುದರಿಂದ ಎಲ್ಲರೂ ಸಹಕರಿಸಬೇಕಾಗಿ ವಿನಂತಿಸಲಾಗಿದೆ. ಚುನಾವಣಾ ನೀತಿ ಸಂಹಿತೆ ಸಡಿಲಿಕೆಯಾದ ನಂತರ ಉದ್ಯೋಗ ಮೇಳದ ದಿನಾಂಕಗಳನ್ನು ತಿಳಿಸಲಾಗುವುದು ಎಂದು ಕಾರ್ಯಕ್ರಮದ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News