ಪ್ರವಾದಿ ಬಗ್ಗೆ ಅವಹೇಳನಕಾರಿ ಪದ ಬಳಕೆ : ಆರೋಪಿ ಜಗದೀಶ್ ಕೈವತ್ತಡ್ಕ ಬಂಧನ

Update: 2021-11-15 14:59 GMT
ಜಗದೀಶ್ ಕೈವತ್ತಡ್ಕ

ಸುಳ್ಯ: ಪ್ರವಾದಿ ಬಗ್ಗೆ ಅವಹೇಳನಕಾರಿ ಪದ ಬಳಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಐವರ್ನಾಡು ಗ್ರಾಮದ ಕೈವಲ್ತಡ್ಕ ನಿವಾಸಿ ಜಗದೀಶ್ ಕೈವಲ್ತಡ್ಕ ಎಂಬಾತನನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ.

ಜಗದೀಶ್ ತನ್ನ ಪೇಸ್ ಬುಕ್ ಖಾತೆಯಲ್ಲಿ ಅವಹೇಳನಕಾರಿ ಪದಬಳಕೆ ಮಾಡಿದ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಬೆಳ್ಳಾರೆ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು. ನಂತರ ಸುಳ್ಯ ಮುಸ್ಲಿಂ ಒಕ್ಕೂಟದ ಸಂಚಾಲಕ ಇಕ್ಬಾಲ್ ಎಲಿಮಲೆ ನೇತೃತ್ವದಲ್ಲಿ ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಲಾಗಿತ್ತು.

ಈ ಕುರಿತು ಗಂಭೀರವಾಗಿ ಪರಿಗಣಿಸಿರುವ ಪೊಲೀಸ್ ವರಿಷ್ಠಾಧಿಕಾರಿ ಆರೋಪಿಯನ್ನು ಬಂಧಿಸಲು ಸೂಚಿಸಿದ್ದು, ಬೆಳ್ಳಾರೆ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News