ರಾಜ್ಯದಲ್ಲಿಂದು 171 ಮಂದಿಗೆ ಕೊರೋನ ದೃಢ, 1 ಮೃತ್ಯು
ಬೆಂಗಳೂರು, ನ.15: ರಾಜ್ಯದಲ್ಲಿ ಸೋಮವಾರ 171 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. ಒಬ್ಬರು ಸೋಂಕಿಗೆ ಬಲಿಯಾಗಿದ್ದು, 255 ಜನರು ಗುಣಮುಖರಾಗಿದ್ದಾರೆ.
ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 29,92,021ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 38,146ಕ್ಕೆ ತಲುಪಿದೆ.
ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 7912ಕ್ಕೆ ಇಳಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.
1 ಸೋಂಕಿತರು ಬಲಿ: ಮೈಸೂರು ಜಿಲ್ಲೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ.
► ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 171 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಳ್ಳಾರಿ 1, ಬೆಳಗಾವಿ 1, ಬೆಂಗಳೂರು ಗ್ರಾಮಾಂತರ 2, ಬೆಂಗಳೂರು ನಗರ 118, ಚಾಮರಾಜನಗರ 4, ಚಿಕ್ಕಬಳ್ಳಾಪುರ 2, ಚಿಕ್ಕಮಗಳೂರು 1, ದಕ್ಷಿಣ ಕನ್ನಡ 8, ಹಾಸನ 3, ಕಲಬುರಗಿ 2, ಕೊಡಗು 3, ಕೋಲಾರ 1, ಮಂಡ್ಯ 1, ಮೈಸೂರು 14, ಶಿವಮೊಗ್ಗ 1, ತುಮಕೂರು 2, ಉಡುಪಿ 4, ಉತ್ತರ ಕನ್ನಡ ಜಿಲ್ಲೆಯಲ್ಲಿ 2 ಪ್ರಕರಣ ಪತ್ತೆಯಾಗಿದೆ.
ರಾಜಧಾನಿಯಲ್ಲಿ 118 ಜನರಿಗೆ ಕೊರೋನ ದೃಢ
ರಾಜಧಾನಿಯಲ್ಲಿ ಸೋಮವಾರದಂದು 118 ಜನರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಸೋಂಕಿಗೆ ಬಲಿಯಾದವರ ಸಂಖ್ಯೆ ಶೂನ್ಯವಾಗಿದೆ.
ನಗರದಲ್ಲಿ ಇಲ್ಲಿಯವರೆಗೆ ಒಟ್ಟು 12,54,093 ಕೊರೋನ ಸೋಂಕಿತರು ದೃಢಪಟ್ಟಿದ್ದು, ಒಟ್ಟು 16,312 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಒಟ್ಟು 12,31,206 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳಲ್ಲಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.