ಮಂಡ್ಯ: ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಹೇಳಿಕೆ ಖಂಡಿಸಿ ಸಂಸದ ಪ್ರತಾಪ್ ಸಿಂಹ ಪ್ರತಿಕೃತಿ ದಹಿಸಿ ಪ್ರತಿಭಟನೆ

Update: 2021-11-15 17:15 GMT

ಮಂಡ್ಯ, ನ.15: ಮಾಜಿ ಸಚಿವ ಹಾಗೂ ಕಾಂಗ್ರೆಸ್ ಪಕ್ಷದ ವಕ್ತಾರ ಪ್ರಿಯಾಂಕ್ ಖರ್ಗೆ ಅವರ ಬಗ್ಗೆ ಸಂಸದ ಪ್ರತಾಪ್ ಸಿಂಹ ‘ಗಂಡೊ-ಹೆಣ್ಣೊ’ ಎಂದು ಅವಹೇಳನಕಾರಿಯಾಗಿ ಮಾತನಾಡಿರುವುದನ್ನು  ಖಂಡಿಸಿ ಪ್ರಿಯಾಂಕ್ ಖರ್ಗೆ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿ, ಪ್ರತಿಕೃತಿ ದಹಿಸಿದರು.

ಜಿಲ್ಲಾಧಿಕಾರಿ ಕಚೇರಿಯ ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿನ ಸರ್ ಎಂವಿ ಪ್ರತಿಮೆ ಎದುರು ಜಮಾವಣೆಗೊಂಡ ಪ್ರತಿಭಟನಾಕಾರರು, ಪ್ರತಾಪ್ ಸಿಂಹ ವಿರುದ್ಧ ಧಿಕ್ಕಾರ ಕೂಗಿ ಅಣಕು ಶವಯಾತ್ರೆ ನಡೆಸಿ ಪ್ರತಿಕೃತಿ ದಹಿಸಿ ಆಕ್ರೋಶವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಕೆಪಿಸಿಸಿ ರಾಜ್ಯ ಸಂಯೋಜಕ ಸುಂಡಹಳ್ಳಿ ಮಂಜುನಾಥ್, ಡಾ.ಎಚ್.ಎನ್.ರವೀಂದ್ರ, ಜಿಪಂ ಮಾಜಿ ಸದಸ್ಯ ಜಯರಾಜು, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಅಂಜನ, ಯುವ ಕಾಂಗ್ರೆಸ್ ಅಧ್ಯಕ್ಷ ವಿಜಯಕುಮಾರ್, ಜಿಲ್ಲಾ ವಕ್ತಾರ ಸಿಎಂ ದ್ಯಾವಪ್ಪ, ನಗರಸಭಾ ಸದಸ್ಯ ಶ್ರೀಧರ್, ಸಾಮಾಜಿಕ ಜಾಲತಾಣದ ಜಿಲ್ಲಾಧ್ಯಕ್ಷ ಅನಿಲ್ ಪಾಲಹಳ್ಳಿ, ನಾಗೇಶ್, ಚಂದ್ರ ಅಜಿತ್, ಕಾರ್ಮಿಕ ವಿಭಾಗದ ರಾಮಶೆಟ್ಟಿ, ಶಿವರುದ್ರ, ನಾಗೇಂದ್ರ ಮಾನವ ಬಂಧುತ್ವ ವೇದಿಕೆಯ ಜಿಲ್ಲಾಧ್ಯಕ್ಷ ಡಿ.ದೇವರಾಜ್ ಕೊಪ್ಪ, ಪಾಂಡವಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜು ಅಂತನಹಳ್ಳಿ, ಮಂಡ್ಯ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರುದ್ರಪ್ಪ, ಉಮೇಶ್,ಐಎನ್‍ಟಿಯುಸಿ ಜಿಲ್ಲಾಧ್ಯಕ್ಷ ನಿಂಗೇಗೌಡ, ಯಶೋಧ, ಚೆಲುವಮೂರ್ತಿ  ಸುವರ್ಣಾವತಿ, ಕಮಲ ರಾಜು, ಗಂಗರಾಜು. ಚೆನ್ನಪ್ಪ ಕನ್ನಲಿ, ಶಿವರಾಮ್ ಹುಲಿವಾನ, ಅನಿಲ್ ಲೋಕಸರ, ಪ್ರಕಾಶ್ ಕೊತ್ತಗೆರೆ, ಹರೀಶ್, ಮಹದೇವ, ಪ್ರಸನ್ನ, ಶ್ರೀಧರ್,ಕನಕಮ್ಮ, ಅಶೋಕ, ಕಿರಣ್ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News