ಚೀನಾದಲ್ಲಿ ಕೊರೋನ ಸೋಂಕು ಉಲ್ಬಣ 7,000 ವಿದ್ಯಾರ್ಥಿಗಳು ಕ್ವಾರಂಟೈನ್ ನಲ್ಲಿ

Update: 2021-11-15 17:26 GMT
ಸಾಂದರ್ಭಿಕ ಚಿತ್ರ

ಬೀಜಿಂಗ್, ನ.15: ಚೀನಾದ ಲಿಯೊನಿಂಗ್ ಪ್ರಾಂತದಲ್ಲಿ ಕೊರೋನ ಸೋಂಕು ಪ್ರಕರಣ ತೀವ್ರವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾವಿರಾರು ವಿದ್ಯಾರ್ಥಿಗಳನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ . ವಿದ್ಯಾರ್ಥಿಗಳೊಂದಿಗೆ ಸಂಪರ್ಕದಲ್ಲಿದ್ದವರನ್ನು ಹೋಟೆಲ್‌ನಲ್ಲಿ ಪ್ರತ್ಯೇಕವಾಗಿ ಇರಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಸುಮಾರು 7,000 ವಿದ್ಯಾರ್ಥಿಗಳನ್ನು ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ. ಚೀನಾದ 21 ಪ್ರಾಂತಗಳಲ್ಲಿ ಸೋಂಕು ಮತ್ತೆ ಉಲ್ಬಣಿಸಿದೆ. ಬಂದರು ನಗರ ದಲಿಯಾನ್‌ನಲ್ಲಿ ಒಂದೇ ಸಮನೆ ಸೋಂಕು ಪ್ರಕರಣ ಹೆಚ್ಚುತ್ತಿದೆ. ಈ ನಗರದಿಂದ ಸಮೀಪದ ನಗರಗಳಿಗೆ ತೆರಳಿದವರನ್ನು ಪತ್ತೆಹಚ್ಚಿ ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ. ಸೋಂಕು ನಿಯಂತ್ರಿಸಲು ಕಠಿಣ ನಿರ್ಬಂಧ ಜಾರಿಗೊಳಿಸಲಾಗಿದೆ. ದಲಿಯಾನ್‌ನಲ್ಲಿ ಶಾಲೆ, ವಾಚನಾಲಯಗಳನ್ನು ಮುಚ್ಚಲಾಗಿದ್ದು ಸಾಮೂಹಿಕ ಸೋಂಕು ಪರೀಕ್ಷೆ ನಡೆಸಲಾಗುತ್ತಿದೆ. ಕಳೆದ ಕೆಲವು ತಿಂಗಳಿಂದ ಹಲವು ನಗರಗಳಲ್ಲಿ ಮತ್ತೆ ಲಾಕ್‌ಡೌನ್ ಜಾರಿಗೊಳಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News