ಮುಧೋಳ ತಾಲೂಕಿನಲ್ಲಿ 6 ಹೊಸ ವಿದ್ಯುತ್ ವಿತರಣಾ ಕೇಂದ್ರಗಳ ಮಂಜೂರು

Update: 2021-11-15 18:52 GMT

ಬೆಂಗಳೂರು, ನ.15: ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನಲ್ಲಿ 400 ಕಿಲೋ ವ್ಯಾಟ್‍ನ 1 ವಿದ್ಯುತ್ ಸ್ವೀಕರಣಾ ಕೇಂದ್ರ ಮತ್ತು 110 ಕಿಲೋ ವ್ಯಾಟ್ ಸಾಮಥ್ರ್ಯದ 5 ಒಟ್ಟು 6 ವಿದ್ಯುತ್ ವಿತರಣಾ ಕೇಂದ್ರಗಳನ್ನು ರಾಜ್ಯ ಸರಕಾರದ ಇಂಧನ ಇಲಾಖೆ ಅನುಮೋದನೆ ನೀಡಿದೆ.

ಲೋಕಾಪುರದಲ್ಲಿ 400 ಕಿ.ವ್ಯಾ ಸಾಮಥ್ರ್ಯದ ವಿದ್ಯುತ್ ಸ್ವೀಕರಣಾ ಕೇಂದ್ರ ನಿರ್ಮಾಣವಾಗಲಿದ್ದು, ಹೆಬ್ಬಾಳ, ಮುಗಳಖೋಡ, ಮಾಚಕನೂರು, ಮಲ್ಲಾಪೂರ ಮತ್ತು ಮಂಟೂರು ಕ್ರಾಸ್‍ಗಳಲ್ಲಿ 110 ಕಿ.ವ್ಯಾ ಸಾಮಥ್ರ್ಯದ 5 ವಿದ್ಯುತ್ ವಿತರಣಾ ಕೇಂದ್ರಗಳು ಒಟ್ಟು 60.25 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುವುದು.

400 ಕಿ.ವ್ಯಾ ಸಾಮರ್ಥ್ಯದ ಲೋಕಾಪೂರ ವಿದ್ಯುತ್ ಸ್ವೀಕರಣಾ ಕೇಂದ್ರವನ್ನು 800 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಲಾಗುವುದು. ಬಾಗಲಕೋಟೆ ಜಿಲ್ಲೆಯಲ್ಲಿ ಒಟ್ಟು 23 ವಿದ್ಯುತ್ ವಿತರಣಾ ಕೇಂದ್ರಗಳನ್ನು ಅನುಮೋದಿಸಲಾಗಿದ್ದು, 1320 ಕೋಟಿ ರೂ.ವೆಚ್ಚದಲ್ಲಿ ಈ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುವುದು ಎಂದು ಇಂಧನ ಇಲಾಖೆ ತಿಳಿಸಿದೆ.

ವಿದ್ಯುತ್ ವಿತರಣಾ ವ್ಯವಸ್ಥೆಯನ್ನು ಬಲಪಡಿಸಲು ಈ ವಿದ್ಯುತ್ ವಿತರಣಾ ಕೇಂದ್ರಗಳು ಮತ್ತು ಸ್ವೀಕರಣಾ ಕೇಂದ್ರಗಳು ಸಹಾಯ ಮಾಡುತ್ತವೆ. ಇದರಿಂದ ನನಗೆ ಹರ್ಷವಾಗಿದೆ ಎಂದು ಜಲಸಂಪನ್ಮೂಲ ಸಚಿವ ಹಾಗೂ ಮುಧೋಳ ಶಾಸಕ ಗೋವಿಂದ ಕಾರಜೋಳ ಸಂತಸ ವ್ಯಕ್ತಪಡಿಸಿದ್ದಾರೆ.

ಮುಧೋಳ ನಗರದಲ್ಲಿ ಶಿಥಿಲಾವಸ್ಥೆಯಲ್ಲಿದ್ದ ಪೊಲೀಸ್ ವಸತಿ ಗೃಹಗಳ ಪುನರ್ ನಿರ್ಮಾಣ ಕಾರ್ಯವನ್ನು ರಾಜ್ಯ ಪೊಲೀಸ್ ವಸತಿ ನಿಗಮದಿಂದ ಕೈಗೆತ್ತಿಕೊಳ್ಳಲಾಗಿದೆ. 48 ಪೊಲೀಸ್ ವಸತಿ ಗೃಹಗಳನ್ನು 15 ಕೋಟಿ ರೂ.ವೆಚ್ಚದಲ್ಲಿ ಪುನರ್ ನಿರ್ಮಾಣ ಮಾಡಲಾಗುವುದೆಂದು ಪೊಲೀಸ್ ಇಲಾಖೆ ತಿಳಿಸಿದೆ. ಇದರಿಂದ ನನಗೆ ಹರ್ಷವಾಗಿದೆ ಎಂದು ಗೋವಿಂದ ಕಾರಜೋಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News