×
Ad

ಪ್ಲಾಸ್ಟಿಕ್ ಮುಕ್ತ ನಗರವಾಗಿದೆ ಕಾರ್ಕಳ : ರೂಪಾ ಶೆಟ್ಟಿ

Update: 2021-11-16 10:15 IST

ಕಾರ್ಕಳ: ಕಾರ್ಕಳ ನಗರವು ಸಂಪೂರ್ಣ ಪ್ಲಾಸ್ಟಿಕ್ ಮುಕ್ತ ನಗರವಾಗಲಿದೆ. ಯಾವುದೇ ಅಂಗಡಿ ಮುಗ್ಗಟ್ಟುಗಳಲ್ಲಿ ಪ್ಲಾಸ್ಟಿಕ್‌ ಮಾರಾಟ ಮಾಡುವುದು ಅಥವ ಉಪಯೋಗಿಸುವುದು ಕಂಡು ಬಂದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಕಾರ್ಕಳ ಪುರಸಭಾ ಮುಖ್ಯಾಧಿಕಾರಿ ರೂಪಾ ಶೆಟ್ಟಿ ತಿಳಿಸಿದರು.

ಅವರು ಕಾರ್ಕಳ ಬಸ್ ಸ್ಟ್ಯಾಂಡ್ ನಲ್ಲಿ ಸ್ವಾತಂತ್ರ್ಯ ಅಮ್ರತ ಮಹೋತ್ಸವ ಅಂಗವಾಗಿ ಕಾರ್ಕಳ ಪುರಸಭೆ ಹಾಗೂ ಇತರ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ "ನಾಲ್ಸಾ ಪಾನ್ ಇಂಡಿಯಾ ಅವೇರ್ನೆಸ್ ಆ್ಯಂಡ್ ಔಟ್ರಿಚ್" ಕಾರ್ಯಕ್ರಮದ ಅಂಗವಾಗಿ ಸ್ವಚ್ಚತಾ ಅಭಿಯಾನ ಮತ್ತು ಪ್ಲಾಸ್ಟಿಕ್ ನಿಷೇಧ ಬಗ್ಗೆ ಮಾಹಿತಿ ನೀಡಿ ಮಾತನಾಡುತ್ತಿದ್ದರು.

ಕೇವಲ ಅಂಗಡಿ ಮುಗ್ಗಟ್ಟುಗಳಲ್ಲಿ ಮಾತ್ರವಲ್ಲದೆ ಪ್ರತಿಯೊಬ್ಬ ವ್ಯಕ್ತಿಯೂ ಕೂಡ ಇದರ ಪ್ಲಾಸ್ಟಿಕ್ ಬಳಕೆ ಬಗ್ಗೆ ಜಾಗ್ರತಿ ಹೊಂದಬೇಕು. ಪ್ಲಾಸ್ಟಿಕ್ ಬದಲು ಬಟ್ಟೆ ಯಾ ಕಾಗದದ ಚೀಲ ಬಳಕೆಗೆ ಆದ್ಯತೆ ನೀಡಬೇಕು. ಪುರಸಭೆ ಅಂಗಡಿಗಳ ಮೇಲೆ ಮುಂದಿನ ದಿನಗಳಲ್ಲಿ ದಾಳಿ ನಡೆಸಿದಾಗ ಪ್ಲಾಸ್ಟಿಕ್ ಕಂಡು ಬಂದಲ್ಲಿ ಲೈಸೆನ್ಸ್ ರದ್ದು ಮಾಡಬೇಕಾದಿತು ಎಂದು ಎಚ್ಚರಿಸಿದ ಅವರು ಹಸಿ ಕಸ ಮತ್ತು ಒಣ ಕಸಗಳನ್ನು ವಿಂಗಡಿಸಿ ಕಸದ ವಾಹನಗಳಿಗೆ ನೀಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಪುರಸಭಾ ಅಧ್ಯಕ್ಷೆ ಸುಮಾ ಕೇಶವ್, ಪುರಸಭಾ ಸದಸ್ಯರಾದ ಯೋಗಿಶ್ ದೇವಾಡಿಗ, ಶೋಭಾ ದೇವಾಡಿಗ, ಪುರಸಭಾ ಕಂದಾಯ ಅಧಿಕಾರಿ ಸಂತೋಷ್ ಕುಮಾರ್, ಹಿರಿಯ ಆರೋಗ್ಯ ಅಧಿಕಾರಿ ಲೈಲಾ ತೋಮಸ್, ಶೈಲೇಶ್ ಕೋಟ್ಯಾ,ನ್, ರಾಕೇಶ್ ಆರ್ ಶೆಟ್ಟಿ, ಇನ್ನಿತರರು ಉಪಸ್ಥಿತರಿದ್ದರು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News