ಕೊಲೆ ಪ್ರಕರಣ; ಗುಂಡು ಹಾರಿಸಿ ಪ್ರಮುಖ ಆರೋಪಿ, ರೌಡಿ ಶೀಟರ್ ರಘು ಬಂಧನ
Update: 2021-11-16 11:27 IST
ಬೆಂಗಳೂರು: ಗಾರ್ಮೆಂಟ್ಸ್ ಉದ್ಯಮಿ ಶ್ರೀಧರ್ ಕೊಲೆ ಪ್ರಕರಣ ಸಂಬಂಧ ಹೆಣ್ಣೂರು ಠಾಣೆಯ ಪೊಲೀಸರು ಪಿಸ್ತೂಲಿನಿಂದ ಗುಂಡು ಹಾರಿಸಿ ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.
ರೌಡಿ ಶೀಟರ್ ರಘು (30) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.
ಮಂಗಳವಾರ ಸ್ಥಳ ಮಹಜರಿಗೆ ಕರೆದುಕೊಂಡು ಹೋಗಿದ್ದ ವೇಳೆ ಹೆಣ್ಣೂರು ಪೊಲೀಸ್ ಠಾಣೆಯ ಪಿಎಸ್ಸೈ ನಿಂಗರಾಜ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಆರೋಪಿ ರಘು ಪರಾರಿಯಾಗಲು ಯತ್ನಿಸಿದ್ದು, ಈ ವೇಳೆ ಇನ್‌ಸ್ಪೆಕ್ಟರ್ ವಸಂತ್ ಅವರು ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದರು. ಆರೋಪಿಯ ಬಲಗಾಲಿಗೆ ಗುಂಡು ತಾಕಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.