×
Ad

ಬೆಳಗಾವಿ: ಪ್ರವಚನ ಮಾಡುತ್ತಿರುವಾಗಲೇ ಕುಸಿದು ಬಿದ್ದು ಸ್ವಾಮೀಜಿ ನಿಧನ; ವೀಡಿಯೊ ವೈರಲ್

Update: 2021-11-16 17:49 IST

ಬೆಳಗಾವಿ, ನ.16: ಪ್ರವಚನ ಮಾಡುತ್ತಿರುವಾಗಲೇ ಹೃದಯಾಘಾತಕ್ಕೊಳಗಾದ ಸ್ವಾಮೀಜಿಯೊಬ್ಬರು ಜನ್ಮದಿನದಂದೇ ನಿಧನರಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಬಳೋಬಾಳ್ ಗ್ರಾಮದಲ್ಲಿ ನಡೆದಿದೆ.

ಬಳೋಬಾಳ್ ಮಠದ ಸಂಗನಬಸವ ಮಹಾಸ್ವಾಮೀಜಿ(53) ಅವರ ಜನ್ಮದಿನದ ನಿಮಿತ್ತ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಕುರ್ಚಿ ಮೇಲೆ ಕುಳಿತು ಆಶೀರ್ವಚನ ನೀಡುತ್ತಿದ್ದ ವೇಳೆ ಸಂಗನಬಸವ ಸ್ವಾಮೀಜಿ ಅವರು ಹೃದಯಾಘಾತಕ್ಕೊಳಗಾಗಿ ಕುಸಿದು ಬಿದ್ದಿದ್ದಾರೆ.

ಬಿದ್ದ ಕ್ಷಣವೇ ಸ್ವಾಮೀಜಿ ಕೊನೆಯುಸಿರೆಳೆದಿದ್ದಾರೆ. ನವೆಂಬರ್ 6ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸ್ವಾಮೀಜಿ ಕುಸಿದು ಬೀಳುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News