ಕಂಟ್ರೋಲ್ ರೂಂ ಆರಂಭ
ಮಂಗಳೂರು, ನ.16: ವಿಧಾನ ಪರಿಷತ್ ಚುನಾವಣೆಯ ದ.ಕ. ಸ್ಥಳೀಯ ಪ್ರಾಧಿಕಾರ ಕ್ಷೇತ್ರದಲ್ಲಿ ನೀತಿ ಸಂಹಿತೆ ಜಾರಿಗೊಂಡಿದ್ದು, ಈ ಅವಧಿಯಲ್ಲಿ ಅಕ್ರಮ ಮದ್ಯ, ಬಿಯರ್, ತಯಾರಿಕೆ, ದಾಸ್ತಾನು, ಸಾಗಾಣಿಕೆ ಬಗ್ಗೆ ಸಾರ್ವಜನಿಕರು ನೀಡುವ ದೂರುಗಳನ್ನು ಸ್ವೀಕರಿಸಲು ಹಾಗೂ ಚುನಾವಣಾ ಆಯೋಗದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಮತ್ತು ಚುನಾವಣೆಯನ್ನು ಮುಕ್ತ ಹಾಗೂ ಶಾಂತಿಯುತವಾಗಿ ನಡೆಯಲು ಸಹಕಾರಿಯಾಗುವಂತೆ ಅಬಕಾರಿ ಇಲಾಖೆ ವತಿಯಿಂದ ಜಿಲ್ಲಾ ಕೇಂದ್ರ ಕಚೇರಿಯಲ್ಲಿ ಹಾಗೂ ತಾಲೂಕು ಮಟ್ಟದ ಕಂಟ್ರೋಲ್ ರೂಮ್‌ಗಳನ್ನು ತೆರೆಯಲಾಗಿದೆ.
ಈ ಕಂಟ್ರೋಲ್ ರೂಂಗಳು ದಿನದ 24 ಗಂಟೆ ಕಾರ್ಯನಿರ್ವಹಿಸಲಿದ್ದು, ಸಾರ್ವಜನಿಕರು ಅಬಕಾರಿ ಅಕ್ರಮಗಳ ಬಗ್ಗೆ ಕಂಟ್ರೋಲ್ ರೂಂಗಳ ದೂ.ಸಂಖ್ಯೆಗೆ ಮಾಹಿತಿಯನ್ನು ನೀಡಬಹುದು.
ಮಂಗಳೂರು ತಾಲೂಕು ವ್ಯಾಪ್ತಿಯ ಕಂಟ್ರೋಲ್ ರೂಂ. ನಗರದ ಮೇರಿಹಿಲ್‌ನ ಅಬಕಾರಿ ಭವನದ ಅಬಕಾರಿ ಉಪ ಆಯುಕ್ತರ ಕಚೇರಿ ದೂ.ಸಂ: 0824-2213872, ಬಂಟ್ವಾಳ ತಾಲೂಕು ವ್ಯಾಪ್ತಿಯ ಬಂಟ್ವಾಳ ವಲಯದ ಅಬಕಾರಿ ನಿರೀಕ್ಷಕರ ಕಚೇರಿ ದೂ.ಸಂ: 08255-232726, ಬೆಳ್ತಂಗಡಿ ತಾಲೂಕು ವ್ಯಾಪ್ತಿಯ ಬೆಳ್ತಂಗಡಿ ವಲಯದ ಅಬಕಾರಿ ನಿರೀಕ್ಷಕರ ಕಚೇರಿ ದೂ.ಸಂ: 08256-298757, ಪುತ್ತೂರು ತಾಲೂಕು ವ್ಯಾಪ್ತಿಯ ಪುತ್ತೂರು ವಲಯದ ಅಬಕಾರಿ ನಿರೀಕ್ಷಕರ ಕಚೇರಿ ದೂ.ಸಂ: 08251-298481, ಸುಳ್ಯ ತಾಲೂಕು ವ್ಯಾಪ್ತಿಯ ಸುಳ್ಯ ವಲಯದ ಅಬಕಾರಿ ನಿರೀಕ್ಷಕರ ಕಚೇರಿ ದೂ.ಸಂ: 08247-231309, ಕೇಂದ್ರ ಕಚೇರಿ ಟೋಲ್ ಫ್ರೀ ಸಂ: 18004252550, ಜಿಲ್ಲಾ ಕಚೇರಿ ಟೋಲ್ ಫ್ರೀ ಸಂ: 18004253872 ಸಂಪರ್ಕಿಸಬಹುದು ಎಂದು ಜಿಲ್ಲಾ ಅಬಕಾರಿ ಇಲಾಖೆಯ ಉಪ ಆಯುಕ್ತರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.