ಸಾರ್ವಜನಿಕರಿಗೆ ಕಿರುಕುಳ; ಆರೋಪಿ ಸೆರೆ
Update: 2021-11-16 23:11 IST
ಉಳ್ಳಾಲ : ಚೆಂಬುಗುಡ್ಡೆ ಬಳಿ ಗಾಂಜಾ ಸೇವಿಸಿ ಸಾರ್ವಜನಿಕರುಗೆ ಕಿರುಕುಳ ನೀಡುತ್ತಿದ್ದ ಆರೋಪದಲ್ಲಿ ಯುವಕನೋರ್ವನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಕಲ್ಲಾಪು ನಿವಾಸಿ ಶೇಖ್ ನಿಹಾಲ್ (24) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಯನ್ನು ದೇರಳಕಟ್ಟೆ ಆಸ್ಪತ್ರೆಯ ವೈದ್ಯಾಧಿಕಾರಿಯವರಿಂದ ತಪಾಸಣೆಗೊಳಪಡಿಸಿದಾಗ ಆತ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿರುವ ಕಾರಣ ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.