ಮೊದಲ ಎಲ್ಜಿಬಿಟಿ ನ್ಯಾಯಾಧೀಶರ ನೇಮಕಕ್ಕೆ ಸುಪ್ರೀಂ ಕೋರ್ಟ್ ಕೊಲೀಜಿಯಂ ಶಿಫಾರಸು
ಹೊಸದಿಲ್ಲಿ, ನ. 16: ಎಲ್ಜಿಬಿಟಿ ಹೋರಾಟಗಾರ ಹಾಗೂ ಹಿರಿಯ ನ್ಯಾಯವಾದಿ ಸೌರಭ್ ಕಿರ್ಪಾಲ್ ಅವರನ್ನು ದಿಲ್ಲಿ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಯಾಗಿ ನೇಮಿಸಲು ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ನೇತೃತ್ವದ ಸುಪ್ರೀಂ ಕೋರ್ಟ್ ಕೊಲೀಜಿಯಂ ಶಿಫಾರಸು ಮಾಡಿದೆ.
ಸೌರಭ್ ಕಿರ್ಪಾಲ್ ಅವರು ದಿಲ್ಲಿ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಯಾಗಿ ನೇಮಕಗೊಂಡರೆ, ದೇಶದಲ್ಲಿಯೇ ಮೊದಲ ಬಾರಿಗೆ ಒಬ್ಬರು ಎಲ್ಜಿಬಿಟಿ ಸಮುದಾಯಕ್ಕೆ ಸೇರಿದ ನ್ಯಾಯಾಧೀಶರನ್ನು ನೇಮಕ ಮಾಡಿದಂತೆ ಆಗುತ್ತದೆ. 2018ರಿಂದ ಕನಿಷ್ಠ ನಾಲ್ಕು ಭಾರಿ ಹಿರಿಯ ವಕೀಲ ಸೌರಭ್ ಕಿರ್ಪಾಲ್ ಅವರ ಉಮೇದುವಾರಿಕೆಯ ನಿರ್ಧಾರವನ್ನು ಮುಂದೂಡಿದ ನಂತರ ಸುಪ್ರೀಂ ಕೋರ್ಟ್ ಅಂತಿಮವಾಗಿ ಅವರನ್ನು ದಿಲ್ಲಿ ಉಚ್ಚ ನ್ಯಾಯಾಲಯದ ನ್ಯಾಯಾಧೀಶರನ್ನು ನೇಮಕ ಮಾಡಲು ಶಿಫಾರಸು ಮಾಡಿದೆ.
ಕಿರ್ಪಾಲ್ ಅವರನ್ನು ನ್ಯಾಯಾಧೀಶರನ್ನಾಗಿ ನೇಮಕ ಮಾಡುವ ಕುರಿತಂತೆ ಸುಪ್ರೀಂ ಕೋರ್ಟ್ ಕೊಲೀಜಿಯಂ ವಿಳಂಬ ಮಾಡುತ್ತಲೇ ಬಂದಿದೆ. ಇತ್ತೀಚಿಗೆ ಕಿರ್ಪಾಲ ಅವರಿಗೆ ಹಿರಿಯ ವಕೀಲ ಎಂದು ಭಡ್ತಿ ನೀಡಲಾಗಿತ್ತು.