×
Ad

ಕಂಗನಾ ರಣಾವತ್ ವಿರುದ್ಧ ಕಾಂಗ್ರೆಸ್ ಅಧಿಕೃತ ದೂರು ದಾಖಲಿಸಲಿದೆ: ನಾನಾ ಪಟೋಲೆ

Update: 2021-11-17 13:55 IST
photo: twitter

ಮುಂಬೈ: ರಾಷ್ಟ್ರಪಿತ ಮಹಾತ್ಮ ಗಾಂಧಿ ಕುರಿತಾಗಿ  ಅವಹೇಳನಕಾರಿ ಹೇಳಿಕೆ ನೀಡಿರುವ ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ಮಹಾರಾಷ್ಟ್ರ ಕಾಂಗ್ರೆಸ್ ಕಾನೂನು ಕ್ರಮ ಕೈಗೊಳ್ಳಲಿದೆ. ಆಕೆಯ ವಿರುದ್ಧ ಮುಂಬೈ ಪೊಲೀಸರಿಗೆ ಕಾಂಗ್ರೆಸ್ ಅಧಿಕೃತ ದೂರು ದಾಖಲಿಸಲಿದೆ ಎಂದು  ಮಹಾರಾಷ್ಟ್ರ ಕಾಂಗ್ರೆಸ್ ಮುಖ್ಯಸ್ಥ ನಾನಾ ಪಟೋಲೆ ಬುಧವಾರ ಹೇಳಿದ್ದಾರೆ.

ಭಾರತಕ್ಕೆ 1947ರಲ್ಲಿ ಬ್ರಿಟಿಷರಿಂದ ಸಿಕ್ಕಿರುವುದು ಸ್ವಾತಂತ್ರ್ಯವಲ್ಲ, ಅದು ಭಿಕ್ಷೆ ಎಂದು ಇತ್ತೀಚೆಗೆ ಹೇಳಿಕೆ ನೀಡಿ ವಿವಾದಕ್ಕೆ ಸಿಲುಕಿದ್ದ ಬಾಲಿವುಡ್ ನಟಿ ಕಂಗನಾ ರಣಾವತ್ ಮಂಗಳವಾರ  ಮಹಾತ್ಮ ಗಾಂಧೀಜಿಯವರ ಅಹಿಂಸಾ ಮಂತ್ರವನ್ನೇ ಲೇವಡಿ  ಮಾಡಿದ್ದಾರೆ. ಒಂದು ಕೆನ್ನೆಗೆ ಹೊಡೆದರೆ ಮತ್ತೊಂದು ಕೆನ್ನೆ ತೋರಿಸು ಎಂಬ ಗಾಂಧೀಜಿಯವರ ಮಂತ್ರವನ್ನು ಅನುಸರಿಸಿದರೆ ನಿಮಗೆ ಸ್ವಾತಂತ್ರ್ಯ ಸಿಗುವುದಿಲ್ಲ. ಭಿಕ್ಷೆ ಮಾತ್ರ ಸಿಗುತ್ತದೆ ಎಂದು ಅವರು ವ್ಯಂಗ್ಯವಾಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News