ಮೊದಲ ಟ್ವೆಂಟಿ-20: ಭಾರತಕ್ಕೆ 163 ರನ್ ಗುರಿ ನೀಡಿದ ನ್ಯೂಝಿಲ್ಯಾಂಡ್

Update: 2021-11-17 15:27 GMT
Photo: BCCI

ಜೈಪುರ: ಆರಂಭಿಕ ಬ್ಯಾಟ್ಸ್ ಮನ್ ಮಾರ್ಟಿನ್ ಗಪ್ಟಿಲ್(70, 42 ಎಸೆತ, 3 ಬೌಂಡರಿ, 4 ಸಿಕ್ಸರ್) ಹಾಗೂ ಮಾರ್ಕ್ ಚಾಪ್ ಮನ್(63,50 ಎಸೆತ, 6 ಬೌಂಡರಿ, 2 ಸಿಕ್ಸರ್)ಅರ್ಧಶತಕಗಳ ನೆರವಿನಿಂದ ನ್ಯೂಝಿಲ್ಯಾಂಡ್ ತಂಡ ಭಾರತ ತಂಡಕ್ಕೆ ಮೊದಲ ಟ್ವೆಂಟಿ-20 ಅಂತರ್ ರಾಷ್ಟ್ರೀಯ ಪಂದ್ಯದ ಗೆಲುವಿಗೆ 163 ರನ್ ಗುರಿ ನೀಡಿದೆ.

ಇಲ್ಲಿನ ಸವಾಯಿ ಮಾನ್ ಸಿಂಗ್ ಸ್ಟೇಡಿಯಂನಲ್ಲಿ ಟಾಸ್ ಜಯಿಸಿದ ಭಾರತದ ನಾಯಕ ರೋಹಿತ್ ಶರ್ಮಾ ಮೊದಲು ಫೀಲ್ಡಿಂಗ್ ಆಯ್ದುಕೊಂಡರು.

ಮೊದಲು ಬ್ಯಾಟಿಂಗ್ ಅವಕಾಶ ಪಡೆದ ನ್ಯೂಝಿಲ್ಯಾಂಡ್ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ಗಳ ನಷ್ಟಕ್ಕೆ 164 ರನ್ ಗಳಿಸಿದೆ.

ಕಿವೀಸ್ ಪರ ಗಪ್ಟಿಲ್ ಹಾಗೂ ಚಾಪ್ ಮನ್ ಹೊರತುಪಡಿಸಿ ಬೇರೆ ಯಾವ ಬ್ಯಾಟ್ಸ್ ಮನ್ ದೊಡ್ಡ ಮೊತ್ತ ಗಳಿಸಲಿಲ್ಲ. ಆರಂಭಿಕ ಬ್ಯಾಟ್ಸ್ ಮನ್ ಡರಿಲ್ ಮಿಚೆಲ್ ಹಾಗೂ ಗ್ಲೆನ್ ಫಿಲಿಪ್ಸ್ ಶೂನ್ಯಕ್ಕೆ ಔಟಾದರು.

ಭಾರತದ ಬೌಲಿಂಗ್ ವಿಭಾಗದಲ್ಲಿ ಭುವನೇಶ್ವರ ಕುಮಾರ್(2-24) ಹಾಗೂ ರವಿಚಂದ್ರನ್ ಅಶ್ವಿನ್(2-23)ತಲಾ 2 ವಿಕೆಟ್ ಗಳನ್ನು ಪಡೆದರು. ದೀಪಕ್ ಚಹಾರ್(1-42) ಹಾಗೂ ಮುಹಮ್ಮದ್ ಸಿರಾಜ್(1-39)ತಲಾ ಒಂದು ವಿಕೆಟ್ ಪಡೆದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News