ವಿಧಾನಪರಿಷತ್ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಗುರುವಾರ ಬಿಡುಗಡೆ ಸಾಧ್ಯತೆ; ಬಿಎಸ್‍ವೈ

Update: 2021-11-17 15:51 GMT

ಬೆಂಗಳೂರು, ನ.17: ವಿಧಾನಪರಿಷತ್ತಿನ ಸ್ಥಳೀಯ ಸಂಸ್ಥೆಗಳ ಕ್ಷೇತ್ರಗಳಿಗೆ ಸಂಬಂಧಿಸಿದ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ನಾಳೆ(ನ.18) ಬಿಡುಗಡೆಯಾಗುವ ಸಾಧ್ಯತೆಯಿದೆ. ಬಿಜೆಪಿ ಪಕ್ಷಕ್ಕೆ ಹೆಚ್ಚಿನ ಸ್ಥಾನಗಳು ಸಿಗಬಹುದು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಬುಧವಾರ ನಗರದಲ್ಲಿರುವ ಕಾವೇರಿ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ಯಕರ್ತರ ಜೊತೆ ಸ್ಥಳೀಯ ಸಮಸ್ಯೆಗಳ ಸಮಾಲೋಚನೆ ನಡೆಸುವ ಉದ್ದೇಶದಿಂದ ನಾಳೆಯಿಂದ ನಾಲ್ಕು ತಂಡಗಳಲ್ಲಿ ನಾಲ್ಕು ದಿನ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳುತ್ತಿದ್ದೇವೆ. ಇದೇ ವೇಳೆ ವಿಧಾನಪರಿಷತ್ ಚುನಾವಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆಯೂ ಸೂಚನೆ ಕೊಡಲಾಗುತ್ತದೆ ಎಂದರು.

ಬಿಟ್ ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರು ಪ್ರತಿದಿನ ಆರೋಪಗಳನ್ನು ಮಾಡುವ ಬದಲು, ಏನಾದರೂ ಮಾಹಿತಿ ಇದ್ದರೆ ಕೊಡಲಿ ತನಿಖೆ ಮಾಡಿಸಲು ಸಿದ್ಧ ಎಂದು ಈಗಾಗಲೆ ಮುಖ್ಯಮಂತ್ರಿ ಹೇಳಿದ್ದಾರೆ. ಆದುದರಿಂದ, ಯಾವುದೆ ಮುಚ್ಚುಮರೆಯಿಲ್ಲದೆ ಏನೆ ಮಾಹಿತಿ ಇದ್ದರೂ ನೀಡಿದರೆ ರಾಜ್ಯಕ್ಕೆ ಒಳ್ಳೆಯದಾಗುತ್ತದೆ ಎಂದು ಯಡಿಯೂರಪ್ಪ ಹೇಳಿದರು.
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News