ಬಿಎಂಟಿಸಿಯಲ್ಲಿ ಟಿಕೆಟ್ ಪಡೆಯದೆ ಪ್ರಯಾಣ; 3.39 ಲಕ್ಷ ರೂ. ಅಧಿಕ ದಂಡ ವಸೂಲಿ
ಬೆಂಗಳೂರು, ನ. 17: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ) ವಾಹನಗಳಲ್ಲಿ ಟಿಕೆಟ್ ರಹಿತ ಪ್ರಮಾಣ ಮಾಡುತ್ತಿದ್ದ ಒಟ್ಟು 2,031 ಮಂದಿಯಿಂದ ಒಟ್ಟು 3.39 ಲಕ್ಷ ರೂ.ಗಳಿಗೂ ಅಧಿಕ ಮೊತ್ತದ ದಂಡ ವಸೂಲಿ ಮಾಡಲಾಗಿದೆ.
ಸಂಸ್ಥೆಯ ತನಿಖಾ ತಂಡಗಳು ಅಕ್ಟೋಬರ್ ತಿಂಗಳಲ್ಲಿ ಒಟ್ಟು 14,233 ಟ್ರಿಪ್‍ಗಳನ್ನು ತಪಾಸಿಸಿ 2,031 ಟಿಕೆಟ್ ರಹಿತ ಪ್ರಯಾಣಿಕರನ್ನು ಪತ್ತೆ ಹಚ್ಚಿ, ಅವರಿಂದ ಒಟ್ಟು 3,39,100 ರೂ.ದಂಡ ವಸೂಲಿ ಮಾಡಿ ಸಂಸ್ಥೆಯ ನಿರ್ವಾಹಕರ ವಿರುದ್ಧ 1,295 ಪ್ರಕರಣಗಳನ್ನು ದಾಖಲಿಸಿರುತ್ತಾರೆ.
ಇದೇ ವೇಳೆ ಮಹಿಳಾ ಪ್ರಯಾಣಿಕರಿಗೆ ಮೀಸಲಾಗಿರುವ ಆಸನಗಳಲ್ಲಿ ಕುಳಿತು ಪ್ರಯಾಣಿಸುತ್ತಿದ್ದ ಒಟ್ಟು 172 ಪುರುಷ ಪ್ರಯಾಣಿಕರಿಂದ ಒಟ್ಟು 1,72,00 ರೂ.ಗಳ ದಂಡವನ್ನು ಮೋಟಾರು ವಾಹನ ಕಾಯ್ದೆ 1988ರ ಕಾಲಂ 177 ಮತ್ತು 94 ರ ಪ್ರಕಾರ ದಂಡ ವಿಧಿಸಲಾಗಿರುತ್ತದೆ. ಸಾರ್ವಜನಿಕ ಪ್ರಯಾಣಿಕರು ಸಂಸ್ಧೆಯ ವಾಹನಗಳಲ್ಲಿ ಪ್ರಯಾಣಿಸುವಾಗ ಅಧಿಕೃತ ಟಿಕೆಟ್ /ದಿನದ ಪಾಸು/ಮಾಸಿಕ ಪಾಸುಗಳನ್ನು ಹೊಂದಿ ಪ್ರಯಾಣಿಸಬೇಕು ಎಂದು ಕೋರಲಾಗಿದೆ.