ಉಪ್ಪಿನಂಗಡಿ: ಫಾಸ್ಟ್ ಫುಡ್ ಅಂಗಡಿ ಮಾಲಕನಿಗೆ ದುಷ್ಕರ್ಮಿಗಳ ತಂಡದಿಂದ ಹಲ್ಲೆ
Update: 2021-11-18 09:57 IST
ಉಪ್ಪಿನಂಗಡಿ: ಫಾಸ್ಟ್ ಫುಡ್ ಅಂಗಡಿಯೊಂದರ ಮಾಲಕನಿಗೆ ದುಷ್ಕರ್ಮಿಗಳ ತಂಡವೊಂದು ಹಲ್ಲೆ ನಡೆಸಿ ಪರಾರಿಯಾದ ಘಟನೆ ಉಪ್ಪಿನಂಗಡಿ ಯಲ್ಲಿ ಬುಧವಾರ ರಾತ್ರಿ ನಡೆದಿದೆ.
ಆದರ್ಶ ನಗರದ ಬಾತೀಶ್ ಎಂಬವರು ಉಪ್ಪಿನಂಗಡಿಯಲ್ಲಿ ಫಾಸ್ಟ್ ಫುಡ್ ಅಂಗಡಿ ನಡೆಸುತ್ತಿದ್ದು, ನಿನ್ನೆ ರಾತ್ರಿ ಇನೋವಾ ಹಾಗೂ ರಿಡ್ಝ್ ಕಾರಿನಲ್ಲಿ ಬಂದ ನಾಲ್ವರು ಕ್ಷುಲ್ಲಕ ವಿಚಾರದಲ್ಲಿ ಬಾತೀಶ್ ಅವರಿಗೆ ಹಲ್ಲೆ ನಡೆಸಿ ಪರಾರಿಯಾಗಿದೆ.
ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.