×
Ad

ಚಾಮುಂಡಿಬೆಟ್ಟದಲ್ಲಿ ಮತ್ತೆ ಭೂ ಕುಸಿತ

Update: 2021-11-18 13:33 IST
ಫೈಲ್ ಫೋಟೊ

ಮೈಸೂರು : ಮೈಸೂರಿನಲ್ಲಿ ನಿರಂತರ ಮಳೆ ಸುರಿಯುತ್ತಿರುವ ಪರಿಣಾಮ ಚಾಮುಂಡಿಬೆಟ್ಟದಲ್ಲಿ ಮತ್ತೆ ಭೂ ಕುಸಿತ ಉಂಟಾಗಿದೆ.

ಚಾಮುಂಡಿಬೆಟ್ಟದಲ್ಲಿರುವ ನಂದಿಗೆ ಹೋಗುವ ರಸ್ತೆಯಲ್ಲಿ ಮತ್ತೆ ಭೂಮಿ ಕುಸಿದು ರಸ್ತೆ ಬಿರುಕು ಬಿಟ್ಟಿದೆ.

ಈ ಮಾರ್ಗದ ರಸ್ತೆ ನಾಲ್ಕನೇ ಬಾರಿಗೆ ಕುಸಿತ ಕಂಡಿದೆ. ಭೂ ಕುಸಿತ ಸ್ಥಳಕ್ಕೆ ಇತ್ತೀಚೆಗಷ್ಟೇ ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ಭೇಟಿ ನೀಡಿ ಪರಿಶೀಲಿಸಿ ಕಾಮಗಾರಿ ಆರಂಭಿಸುವುದಾಗಿ ಹೇಳಿದ್ದರು. ಇದೀಗ ಮತ್ತೊಮ್ಮೆ ಭೂಮಿ ಕುಸಿದಿರುವುದು ಮತ್ತಷ್ಟು ಆತಂಕಕ್ಕೀಡು ಮಾಡಿದ್ದು ಕಾಮಗಾರಿ ವಿಳಂಭವಾಗುವ ಸಾಧ್ಯತೆ ಇದೆ.

ಮೈಸೂರಿನಲ್ಲಿ ಬುಧವಾರ ರಾತ್ರಿಯಿಡೀ ಮಳೆ ಸುರಿದಿರುವುದರಿಂದ ಚಾಮುಂಡಿಬೆಟ್ಟದಲ್ಲಿನ ನಂದಿಗೆ ಹೋಗುವ ರಸ್ತೆ ಕುಸಿದಿದೆ ಎಂದು ಹೇಳಲಾಗುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News