ರಾಜ್ಯದಲ್ಲಿ ಗುರುವಾರ 313 ಮಂದಿಗೆ ಕೊರೋನ ಸೋಂಕು ದೃಢ, 4 ಮಂದಿ ಸಾವು

Update: 2021-11-18 15:15 GMT
ಸಾಂದರ್ಭಿಕ ಚಿತ್ರ (PTI)

ಬೆಂಗಳೂರು: ರಾಜ್ಯದಲ್ಲಿ ಗುರುವಾರ 313 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. 4 ಜನರು ಸೋಂಕಿಗೆ ಬಲಿಯಾಗಿದ್ದು, 369 ಜನರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 29,92,897ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 38,165ಕ್ಕೆ ತಲುಪಿದೆ.        
ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 7,349ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.

ನಾಲ್ವರು ಸೋಂಕಿತರು ಬಲಿ: ಬೆಂಗಳೂರು ನಗರ 2, ರಾಮನಗರ 1, ಉತ್ತರ ಕನ್ನಡ ಜಿಲ್ಲೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. 

ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 313 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಳ್ಳಾರಿ 1, ಬೆಂಗಳೂರು ಗ್ರಾಮಾಂತರ 2, ಬೆಂಗಳೂರು ನಗರ 179, ಬೀದರ್ 1, ಚಾಮರಾಜನಗರ 2, ಚಿಕ್ಕಮಗಳೂರು 6, ಚಿತ್ರದುರ್ಗ 2, ದಕ್ಷಿಣ ಕನ್ನಡ 9, ಧಾರವಾಡ 1, ಹಾಸನ 13, ಕೊಡಗು 1, ಕೋಲಾರ 6, ಮೈಸೂರು 51, ಶಿವಮೊಗ್ಗ 4, ತುಮಕೂರು 20, ಉಡುಪಿ 4, ಉತ್ತರ ಕನ್ನಡ ಜಿಲ್ಲೆಯಲ್ಲಿ 11 ಪ್ರಕರಣ ಪತ್ತೆಯಾಗಿವೆ.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News