ನ.20ರಂದು ರಕ್ತದಾನ ಶಿಬಿರ
Update: 2021-11-18 21:31 IST
ಉಡುಪಿ, ನ.18: ಜಿಲ್ಲಾ ಆರೋಗ್ಯ ಇಲಾಖೆ, ಎನ್‌ಹೆಚ್‌ಎಂ ನೌಕರರ ಜಿಲ್ಲಾ ಸಂಘ, ಜಿಲ್ಲಾ ಸರಕಾರಿ ನೌಕರರ ಸಂಘ, ರಕ್ತನಿಧಿ ಜಿಲ್ಲಾಸ್ಪತ್ರೆ ಅಜ್ಜರಕಾಡು, ಲಯನ್ಸ್ ಕ್ಲಬ್ ಹಾಗೂ ಅಪ್ಪು ಅಭಿಮಾನಿ ಬಳಗ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಗರಸಭಾ ವ್ಯಾಪ್ತಿಯಲ್ಲಿ ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ ಸ್ಮರಣಾರ್ಥ ನ.20ರಂದು ಬೆಳಗ್ಗೆ 10 ಗಂಟೆಯಿಂದ ನಗರ ಆರೋಗ್ಯ ಕೇಂದ್ರದಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿ ಸಲಾಗಿದೆ ಎಂದು ಸಂಘಟಕರ ಪ್ರಕಟಣೆ ತಿಳಿಸಿದೆ.