ಮಳೆ ಹೆಚ್ಚಾಗಿರುವ ಜಿಲ್ಲೆಗಳ ಶಾಲೆಗಳಿಗೆ ಎರಡು ದಿನ ರಜೆ

Update: 2021-11-18 16:15 GMT

ಬೆಂಗಳೂರು, ನ.18: ರಾಜ್ಯದಲ್ಲಿ ನಿರಂತರವಾಗಿ ಮಳೆ ಬೀಳುತ್ತಿರುವುದರಿಂದ ಮಳೆ ಹೆಚ್ಚಾಗಿರುವ ಜಿಲ್ಲೆಗಳ ಶಾಲೆಗಳಿಗೆ ಎರಡು ದಿನಗಳು ರಜೆ ಘೋಷಿಸಿ ಸರಕಾರವು ಆದೇಶ ಹೊರಡಿಸಿದೆ.

ನಿರಂತರ ಮಳೆಯಿಂದಾಗಿ ಶಾಲೆಗೆ ಹೋಗಲು ಮತ್ತು ಬರಲು ವಿದ್ಯಾರ್ಥಿಗಳಿಗೆ ಕಷ್ಟವಾಗುತ್ತಿದೆ. ರಾಜ್ಯದ ಕೆಲವು ಜಿಲ್ಲೆಗಳಲ್ಲಿ ನಿರಂತರವಾಗಿ ಮಳೆ ಬೀಳುತ್ತಿರುವ ಪ್ರಯುಕ್ತ ವಿದ್ಯಾರ್ಥಿಗಳು ಶಾಲೆಗೆ ಬಂದು ಹೋಗಲು ತೊಂದರೆಯಾಗಬಹುದಾಗಿರುತ್ತದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಆಯಾ ಜಿಲ್ಲೆಗಳ ಪರಿಸ್ಥಿತಿಯನ್ನು ಅವಲೋಕಿಸಿ ಶಾಲೆಗಳಿಗೆ ರಜೆಯನ್ನು ಘೋಷಿಸುವ ಕುರಿತು ಅಗತ್ಯ ಕ್ರಮ ವಹಿಸುವುದು ಎಂದು ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಪತ್ರ ಬರೆದಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News