ಕೋಲಾರ ಜಿಲ್ಲೆಯಲ್ಲಿ ಧಾರಾಕಾರ ಮಳೆ: ಶಾಲೆಗಳಿಗೆ ಎರಡು ದಿನ ರಜೆ

Update: 2021-11-18 18:03 GMT

ಕೋಲಾರ: ಜಿಲ್ಲೆಯಲ್ಲಿ ಎಡೆಬಿಡದೇ ಸುರಿಯುತ್ತಿರುವ ಮಳೆಯಿಂದ  ಜನಜೀವನ ಅಸ್ಥವ್ಯಸ್ತವಾಗಿದ್ದು, ಮುನ್ನಚ್ಚರಿಕಾ ಕ್ರಮವಾಗಿ ನ.19 ಹಾಗೂ 20 ರಂದು ಎರಡು ದಿನ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ ಎಂದು ಡಿಡಿಪಿಐ ರೇವಣ ಸಿದ್ದಪ್ಪ ತಿಳಿಸಿದ್ದಾರೆ.

ಭಾರತೀಯ ಹವಾಮಾನ ಇಲಾಖೆ ಈಗಾಗಲೇ ನ.19 ಮತ್ತು 20 ರಂದು ಬಿರುಗಾಳಿಯಿಂದ ಕೂಡಿದ ಹೆಚ್ಚಿನ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದು, ಗುರುವಾರವೂ ಮಳೆ ಬೆಳಗ್ಗಿನಿಂದ ಎಡೆಬಿಡದೇ ಸುರಿಯುತ್ತಿದೆ.

ಬಹುತೇಕ ಕಡೆಗಳಲ್ಲಿ ಶಾಲೆಗಳ ಮೇಲ್ಚಾವಣಿ ಮೇಲೆ ಮಳೆ ನೀರು ನಿಂತು ಕಟ್ಟಡಗಳು ಸುರಿಯುತ್ತಿವೆ, ಜತೆಗೆ ಕೋವಿಡ್ ಎಸ್‌ಒಪಿ ಪಾಲನೆ ಕಡ್ಡಾಯವಾಗಿರುವುದರಿಂದ  ಮಕ್ಕಳಿಗೆ ಪಾಠ ಪ್ರವಚನಗಳಿಗೆ ಅಡ್ಡಿಯಾಗಿದೆ ಎಂದು ತಿಳಿಸಿದ್ದಾರೆ.

ಈ ಹಿನ್ನಲೆಯಲ್ಲಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು ರಜೆ ನೀಡುವಂತೆ ಮನವಿ ಮಾಡಿದ್ದು, ಅದರಂತೆ ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗಿತ್ತು.

ಈ ಹಿನ್ನಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿಗಳು ಸೂಚನೆ ನೀಡಿರುವುದರಿಂದ ಎರಡು ದಿನ ಜಿಲ್ಲೆಯ ಎಲ್ಲಾ ಸರ್ಕಾರಿ,ಅನುದಾನಿತ,ಅನುದಾನರಹಿತ ಕಿರಿಯ,ಹಿರಿಯ,ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಆದೇಶಿದ್ದಾರೆ ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News