ಚಾಮರಾಜನಗರ: ಅಕ್ರಮವಾಗಿ ಶೇಖರಿಸಿಟ್ಟಿದ್ದ ಸ್ಫೋಟಕ ವಸ್ತುಗಳು ಪತ್ತೆ

Update: 2021-11-18 18:21 GMT

ಚಾಮರಾಜನಗರ: ಹಳ್ಳವೊಂದರ ಪೈಪ್​ನಲ್ಲಿ ಅಕ್ರಮವಾಗಿ ಶೇಖರಿಸಿಟ್ಟಿದ್ದ ಸ್ಫೋಟಕ ವಸ್ತುಗಳು ಪತ್ತೆಯಾಗಿರುವ ಘಟನೆ ಚಾಮರಾಜನಗರ ತಾಲೂಕಿನ ವಿ‌.ಸಿ.ಹೊಸೂರು ಗ್ರಾಮದ ಸಮೀಪ ನಡೆದಿದೆ‌. 

ಅಕ್ರಮ ಗಣಿಗಾರಿಕೆ ನಡೆಸುವವರು ಇಲ್ಲವೇ ಬೇಟೆಯಾಡುವವರು ಈ ಸ್ಫೋಟಕ ವಸ್ತುಗಳನ್ನು ಅಡಗಿಸಿಟ್ಟಿರುವ ಶಂಕೆ ವ್ಯಕ್ತವಾಗಿದೆ. ಸದ್ಯ 120 ಜಿಲಿಟಿನ್​ ಕಡ್ಡಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. 

ನೆರೆಯ ತಮಿಳುನಾಡಿನ ತಿರುಚಿ ಜಿಲ್ಲೆಯಲ್ಲಿ ತಯಾರಿಸಿರುವ ಸ್ಫೋಟಕ‌ ಇದಾಗಿದ್ದು, ಅಕ್ರಮವಾಗಿ ಗಣಿಗಾರಿಕೆ ನಡೆಸಲು ಇಲ್ಲವೇ ಅಂತಹವರಿಗೆ ಮಾರಾಟ ಮಾಡಲು ತಂದಿಟ್ಟರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಈ ಸಂಬಂಧ ಚಾಮರಾಜನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News