×
Ad

ಕಡಪಾ, ತಿರುಪತಿಯಲ್ಲಿ ಪ್ರವಾಹ: ಮೂವರು ಮೃತ್ಯು,30 ಮಂದಿ ನಾಪತ್ತೆ

Update: 2021-11-19 15:19 IST

ಕಡಪ: ಆಂಧ್ರಪ್ರದೇಶದ ಕಡಪಾ ಜಿಲ್ಲೆಯಲ್ಲಿ ಶುಕ್ರವಾರ ಸಂಭವಿಸಿದ ಹಠಾತ್ ಪ್ರವಾಹದಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಹಾಗೂ  30 ಮಂದಿ ನಾಪತ್ತೆಯಾಗಿದ್ದಾರೆ ಎಂದು India Today ವರದಿ ಮಾಡಿದೆ.

ಅಣೆಕಟ್ಟು ಒಡೆದು ಚೆಯ್ಯೆರು ನದಿ ಉಕ್ಕಿ ಹರಿಯುವ ಮೂಲಕ ಹಲವಾರು ಗ್ರಾಮಗಳು ಜಲಾವೃತಗೊಂಡಿವೆ. ನಂದಲೂರಿನ ಸ್ವಾಮಿ ಆನಂದ ದೇವಸ್ಥಾನವೂ ಮುಳುಗಡೆಯಾಗಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು ಶುಕ್ರವಾರ ಮುಂಜಾನೆ ತಮಿಳುನಾಡು ಹಾಗೂ  ಆಂಧ್ರಪ್ರದೇಶದ ನಡುವೆ ಕರಾವಳಿಯನ್ನು ದಾಟಿದ್ದರಿಂದ ಆಂಧ್ರಪ್ರದೇಶದಲ್ಲಿ ಭಾರಿ ಮಳೆಯಾಗಿದೆ.

ವೆಂಕಟೇಶ್ವರನ ಆವಾಸಸ್ಥಾನವಾದ ತಿರುಮಲದಲ್ಲಿ ಭಾರಿ ಪ್ರವಾಹ ಉಂಟಾಗಿದ್ದು, ನೂರಾರು ಯಾತ್ರಾರ್ಥಿಗಳು ಸಿಕ್ಕಿಹಾಕಿಕೊಂಡಿದ್ದಾರೆ. ತಿರುಮಲ ಬೆಟ್ಟದ ಮುಖ್ಯ ದೇವಾಲಯಕ್ಕೆ ಹೊಂದಿಕೊಂಡಿರುವ ನಾಲ್ಕು ಬೀದಿಗಳು ಜಲಾವೃತಗೊಂಡಿವೆ. ಪ್ರವಾಹದ ನೀರಿನಿಂದ ಎತ್ತರದ ನೆಲವನ್ನು ತಲುಪಲು ಜನರು ಅಲೆದಾಡಲು ಪ್ರಯತ್ನಿಸುತ್ತಿರುವುದನ್ನು ವೀಡಿಯೊಗಳು ತೋರಿಸಿವೆ.

ತಿರುಮಲ ಬೆಟ್ಟದ ಮೇಲೆ ಹಲವು ಮರಗಳು ನೆಲಕ್ಕುರುಳಿದ್ದು, ಪಾಪವಿನಾಶನಂ ಮತ್ತು ಶ್ರೀವಾರಿ ಪಾದಾಲು ಮುಂತಾದ ಸ್ಥಳಗಳಿಗೆ ರಸ್ತೆಯನ್ನು ಮುಚ್ಚಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News