ರಾಜ್ಯ ವಿಧಾನಪರಿಷತ್ ಚುನಾವಣೆ: ಜೆಡಿಎಸ್ ಅಭ್ಯರ್ಥಿ ಸ್ಪರ್ಧೆಗೆ ಚಿಂತನೆ
ಉಡುಪಿ, ನ.19: ಅವಿಭಜಿತ ದಕ್ಷಿಣ ಕನ್ನಡದ ಸ್ಥಳೀಯ ಸಂಸ್ಥೆಗಳಿಂದ ರಾಜ್ಯ ವಿಧಾನಪರಿಷತ್‌ಗೆ ನಡೆಯುವ ಚುನಾವಣೆಯಲ್ಲಿ ಜಾತ್ಯತೀತ ಜನತಾದಳ ಪಕ್ಷದಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಪಕ್ಷದಲ್ಲಿ ಚಿಂತನೆ ನಡೆಯುತ್ತಿದೆ ಎಂದು ಉಡುಪಿ ಜಿಲ್ಲಾಧ್ಯಕ್ಷ ಯೋಗೀಶ್ ವಿ.ಶೆಟ್ಟಿ ತಿಳಿಸಿದ್ದಾರೆ.
ಈಗಾಗಲೇ ಚುನಾವಣಾ ಕಣಕ್ಕಿಳಿಯಲು ಸುಳ್ಯದಿಂದ ಕುಂದಾಪುರದವರಗೆ ಹಲವಾರು ಆಕಾಂಕ್ಷಿಗಳು ಮುಂದೆ ಬಂದಿದ್ದಾರೆ. ಈ ಬಾರಿಯ ಚುನಾವಣೆ ಯಲ್ಲಿ 2 ರಾಷ್ಟ್ರೀಯ ಪಕ್ಷಗಳ ನಡುವೆ ಗೊಂದಲವಿದೆ. ಜೆಡಿಎಸ್‌ಗೆ ಪಕ್ಷಾತೀತ ಬೆಂಬಲ ವ್ಯಕ್ತವಾದ ಹಿನ್ನೆಲೆಯಲ್ಲಿ ಸೂಕ್ತ ಅಭ್ಯರ್ಥಿಯನ್ನು ಕಣಕ್ಕಿಳಿಸುವ ವಿಚಾರದಲ್ಲಿ ಚಿಂತನೆ ನಡೆಸುತ್ತಿದ್ದೇವೆ ಎಂದವರು ಹೇಳಿದ್ದಾರೆ.
ಪಕ್ಷದ ವರಿಷ್ಠರಾದ ಎಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಹೆಚ್. ಡಿ.ಕುಮಾರಸ್ವಾಮಿ ಹಾಗೂ ಪಕ್ಷದ ರಾಜ್ಯ ಅಧ್ಯಕ್ಷ ಹೆಚ್ ಕೆ ಕುಮಾರಸ್ವಾಮಿ ಅವರ ಜೊತೆ ಚರ್ಚಿಸಿ ಸೂಕ್ತ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.