ಸಹಾಯಧನಕ್ಕೆ ಅವಧಿ ವಿಸ್ತರಣೆ
ಉಡುಪಿ, ನ.19: ಪ್ರಸಕ್ತ ಸಾಲಿನಲ್ಲಿ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ವತಿಯಿಂದ, ಸಫಾಯಿ ಕರ್ಮಚಾರಿ/ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್ ಹಾಗೂ ಪೌರ ಕಾರ್ಮಿಕರ 9, 10, ಪ್ರಥಮ ಹಾಗೂ ದ್ವಿತೀಯ ಪಿಯುಸಿ ಓದುತ್ತಿರುವ ಮಕ್ಕಳಿಗೆ ಆನ್‌ಲೈನ್ ಪಾಠ ಕೇಳಲು, ಅವರ ವಿದ್ಯಾಭ್ಯಾಸದ ಅನುಕೂಲಕ್ಕಾಗಿ ಟ್ಯಾಬ್‌ಗಳ ವಿತರಣೆ ಹಾಗೂ ನೋಂದಾಯಿತ ಸಂಘ- ಸಂಸ್ಥೆಗಳಲ್ಲಿ ಸ್ವಚ್ಛತಾ ಕಾರ್ಯದಲ್ಲಿ ತೊಡಗಲು ಬಯಸುವ ಸಂಘ-ಸಂಸ್ಥೆಗಳಿಗೆ ಸಕ್ಕಿಂಗ್ ಮತ್ತು ಜಟ್ಟಿಂಗ್ ಯಂತ್ರಗಳನ್ನು ಖರೀದಿಸಲು ನಿಗಮದಿಂದ ಶೇ.75 ರಷ್ಟು ಸಹಾಯಧನ ಲಭ್ಯವಿದ್ದು, ಆಸಕ್ತರು ನಿಗಮದ ವೆಬ್‌ಸೈಟ್ -www.ksskdc.kar.nic.in-ನಲ್ಲಿ ಅರ್ಜಿ ಸಲ್ಲಿಸುವ ಅವಧಿಯನ್ನು ಡಿಸೆಂಬರ್ 15ರವರೆಗೆ ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮ, ರಜತಾದ್ರಿ, ಮಣಿಪಾಲ, ದೂ.ಸಂ: 0820-2574884ಅನ್ನು ಸಂಪರ್ಕಿಸುವಂತೆ ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.