ಡಿ.13ರಿಂದ ಬೆಳಗಾವಿಯಲ್ಲಿ ಅಧಿವೇಶನ
Update: 2021-11-19 20:23 IST
ಬೆಂಗಳೂರು, ನ.19: ರಾಜ್ಯ ವಿಧಾನಸಭೆಯ ಚಳಿಗಾಲದ ಅಧಿವೇಶನವು ಡಿ.13ರಂದು ಬೆಳಗ್ಗೆ 11 ಗಂಟೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸಮಾವೇಶಗೊಳ್ಳುವಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಧಿಸೂಚನೆ ಹೊರಡಿಸಿದ್ದಾರೆ.
ಕೋವಿಡ್ ಪ್ರಕರಣಗಳು ಕಡಿಮೆ ಆಗಿರುವುದರಿಂದ ಬೆಳಗಾವಿಯಲ್ಲಿ ಅಧಿವೇಶನ ನಡೆಸಲು ಸರ್ಕಾರ ತೀರ್ಮಾನಿಸಿದೆ.