ಕಾಂಗ್ರೆಸ್ ಸದಸ್ಯತ್ವಕ್ಕೆ ಬೂತ್ ಮಟ್ಟದಲ್ಲಿ ಚಾಲನೆ
Update: 2021-11-19 20:42 IST
ಮಂಗಳೂರು, ನ.19: ಕಾಂಗ್ರೆಸ್ ಪಕ್ಷದ ಸದಸ್ಯತ್ವ ಅಭಿಯಾನಕ್ಕೆ ಶುಕ್ರವಾರ ದ.ಕ. ಜಿಲ್ಲೆಯಾದ್ಯಂತ ಏಕ ಕಾಲದಲ್ಲಿ ಬೂತ್ ಮಟ್ಟದಲ್ಲಿ ಚಾಲನೆ ನೀಡಲಾಯಿತು.
ಕಾಂಗ್ರೆಸ್ ಸದಸ್ಯತ್ವ ಅಭಿಯಾನದ ಜಿಲ್ಲಾ ಸಮಿತಿ ಸದಸ್ಯ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ನಝೀರ್ ಬಜಾಲ್ ನೇತೃತ್ವದಲ್ಲಿ ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯ ಬಜಾಲ್ ವಾರ್ಡ್‌ನಲ್ಲಿ ಸದಸ್ಯತ್ವ ಅಭಿಯಾನ ಆರಂಭಗೊಂಡಿತು.
ಈ ಸಂದರ್ಭ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷ ಮುಹಮ್ಮದ್ ಹನೀಫ್ ಬಜಾಲ್, ಕಾಂಗ್ರೆಸ್ ಕಾರ್ಯಕರ್ತರಾದ ಮುಹಮ್ಮದ್ ಶಮೀರ್, ಅಬ್ದುಲ್ ಜಬ್ಬಾರ್, ಮುನೀರ್ ಎಚ್.ಎಸ್, ಇಬ್ರಾಹಿಂ, ಹಮ್ಮಬ್ಬ ಮೋನು, ಶೌಕತ್ ಇಬ್ರಾಹಿಂ, ಮುಹಮ್ಮದ್ ಉಪಸ್ಥಿತರಿದ್ದರು.