ಕೃಷಿ ತಿದ್ದುಪಡಿ ಕಾಯ್ದೆ ವಾಪಸ್: ಎಸ್‌ಡಿಪಿಐ ವತಿಯಿಂದ ಸಿಹಿತಿಂಡಿ ಹಂಚಿ ಸಂಭ್ರಮ

Update: 2021-11-19 17:02 GMT

ಮಂಗಳೂರು, ನ.19: ಕೇಂದ್ರ ಸರಕಾರವು ಮೂರು ಕೃಷಿ ಕಾಯ್ದೆಯನ್ನು ವಾಪಸ್ ಪಡೆದ ಹಿನ್ನೆಲೆಯಲ್ಲಿ ಎಸ್‌ಡಿಪಿಐ ದ.ಕ.ಜಿಲ್ಲಾ ಸಮಿತಿಯು ಶುಕ್ರವಾರ ನಗರದ ಕ್ಲಾಕ್‌ಟವರ್ ಬಳಿ ಸಿಹಿ ತಿಂಡಿ ಹಂಚಿ ಸಂಭ್ರಮಿಸಿತು. ಅಲ್ಲದೆ ಚಾರಿತ್ರಿಕ ರೈತ ಹೋರಾಟದಲ್ಲಿ ಪಾಲ್ಗೊಂಡ ಎಲ್ಲಾ ರಾಜಕೀಯ ಪಕ್ಷಗಳ, ಸಂಘಟನೆಗಳ ಮುಖಂಡರಿಗೆ ಈ ಸಂದರ್ಭ ಅಭಿನಂದನೆ ಸಲ್ಲಿಸಲಾಯಿತು.

ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ಕೇಂದ್ರ ಸರಕಾರವು ಕರಾಳ ಕೃಷಿ ಕಾಯ್ದೆಯನ್ನು ವಾಪಸ್ ಪಡೆದ ಬಗ್ಗೆ ಘೋಷಿಸಿದರೆ ಸಾಲದು, ಹುತಾತ್ಮ ರೈತರ ಕುಟುಂಬಸ್ಥರಿಗೆ ಕೇಂದ್ರ ಸರಕಾರಿ ಉದ್ಯೋಗ ನೀಡಬೇಕು, ರೈತರ ವಿರುದ್ದ ದಾಖಲಿಸಲಾದ ಸುಳ್ಳು ಪ್ರಕರಣ ವಾಪಸ್ ಪಡೆಯಬೇಕು. ಕರ್ನಾಟಕ ಸರಕಾರ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ಮಾಡಿದ್ದನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.

ಎಸ್‌ಡಿಪಿಐ ದ.ಕ.ಜಿಲ್ಲಾಧ್ಯಕ್ಷ ಅಬೂಬಕರ್ ಕುಳಾಯಿ, ಪ್ರಧಾನ ಕಾರ್ಯದರ್ಶಿ ಅನ್ವರ್ ಸಾದಾತ್ ಬಜತ್ತೂರು, ಕಾರ್ಪೊರೇಟರ್ ಮುನೀಬ್ ಬೆಂಗರೆ, ಜಲೀಲ್ ಕೃಷ್ಣಾಪುರ, ಅಶ್ರಫ್ ಕೆ.ಸಿ.ರೋಡ್, ಝಾಕಿರ್‌ಉಳ್ಳಾಲ್, ಯೂಸುಫ್ ಆಲಡ್ಕ, ಆಸೀಫ್ ಕೋಟೆಬಾಗಿಲು, ಅಕ್ಬರ್ ಕುದ್ರೋಳಿ ಮತ್ತಿತರರು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News