×
Ad

​ಕೇರಳ-ಕರ್ನಾಟಕ ರೈಲು ಸಂಚಾರ ಪುನರಾರಂಭಕ್ಕೆ ಆಗ್ರಹಿಸಿ ಪ್ರತಿಭಟನೆ

Update: 2021-11-20 17:40 IST

ಮಂಗಳೂರು, ನ.20: ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಮಂಗಳೂರು ಮಹಾನಗರದ ವತಿಯಿಂದ ಕೇರಳ - ಕರ್ನಾಟಕ ರೈಲು ಸಂಚಾರ ಪುನರಾರಂಭಿಸುವಂತೆ ಆಗ್ರಹಿಸಿ ಬೃಹತ್ ಪ್ರತಿಭಟನೆ ಶನಿವಾರ ನಗರದ ಸೆಂಟ್ರಲ್ ರೈಲು ನಿಲ್ದಾಣದ ಆವರಣದಲ್ಲಿ ನಡೆಯಿತು.

ಶೈಕ್ಷಣಿಕವಾಗಿ ಮುಂದುವರೆದಿರುವ ಮಂಗಳೂರಿಗೆ ರಾಜ್ಯ ಮಾತ್ರವಲ್ಲದೆ, ಹೊರ ರಾಜ್ಯ ವಿದ್ಯಾರ್ಥಿಗಳೂ ಬರುತ್ತಾರೆ. ಅದರಲ್ಲೂ ಕೇರಳ ರಾಜ್ಯದವರು ಪ್ರತಿನಿತ್ಯ ರೈಲಿನಲ್ಲಿ ಪ್ರಯಾಣ ಮಾಡಿ ಕಾಲೇಜುಗಳಿಗೆ ಬರುತ್ತಿದ್ದು, ಇದೀಗ ಕೋವಿಡ್ ಕಾರಣದಿಂದ ಅಂತರ್ ರಾಜ್ಯ ರೈಲು ಸಂಚಾರವನ್ನು ನಿಲ್ಲಿಸಲಾಗಿದೆ. ಅದನ್ನು ಪುನಃ ಪ್ರಾರಂಭಿಸಬೇಕು ಎಂದು ಎಬಿವಿಪಿ ವಿಭಾಗ ಸಂಚಾಲಕ್ ಹರ್ಷಿತ್ ಕೆ ಹೇಳಿದರು.

ವಿದ್ಯಾರ್ಥಿಗಳಿಗೆ ಬಸ್ಸಿನಲ್ಲಿ ಬರುವುದು ಆರ್ಥಿಕ ಹೊರೆಯಾಗುವುದರಿಂದ ಶೀಘ್ರದಲ್ಲೇ ರೈಲು ಸಂಚಾರ ಆರಂಭಿಸಬೇಕು ಎಂದು ಅಭಾವಿಪ ಜಿಲ್ಲಾ ಸಂಚಾಲಕ್ ನಿಶಾನ್ ಆಳ್ವ ಹೇಳಿದರು.

ಈ ಸಂದರ್ಭ ರೈಲ್ವೇಯ ಹಿರಿಯ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು. ಅಭಾವಿಪ ನಗರ ಸಂಘಟನಾ ಕಾರ್ಯದರ್ಶಿ ಅಜಯ್ ಪ್ರಭು, ನಗರ ಕಾರ್ಯದರ್ಶಿ ಶ್ರೇಯಸ್ ಶೆಟ್ಟಿ, ವಿದ್ಯಾರ್ಥಿ ಮುಖಂಡರಾದ ಆದಿತ್ಯ, ಗರಣೀಶ್, ಭವನೀಶ್, ಶ್ರೀಪಾದ, ಪ್ರಣಮ್, ನೀಲೇಶ್, ಚಂದನ್ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News