ಎಸ್ಸೆಸ್ಸೆಫ್ ಪ್ರತಿಭೋತ್ಸವ ಸ್ಪರ್ಧೆಗಳು ಶೈಕ್ಷಣಿಕ ಪ್ರೇರಕವಾಗಿ ಮೂಡಿಬರಲಿ: ಎಂ.ಎಲ್.ಸಿ‌ ಹರೀಶ್ ಕುಮಾರ್

Update: 2021-11-20 14:44 GMT

ಬೆಳ್ತಂಗಡಿ: ಬಡತನ ಯಾವತ್ತೂ ಶಿಕ್ಷಣಕ್ಕೆ ಅಡ್ಡಿಯಾಗಬಾರದು. ಸಂವಿಧಾನ ರಚಿಸಿದ ಡಾ.‌ಬಾಬಾ ಸಾಹೇಬ್ ಅಂಬೇಡ್ಕರ್, ರಾಷ್ಟ್ರಪತಿಯಾಗಿದ್ದ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ಅವರು ಪಡೆದಿದ್ದ ಶಿಕ್ಷಣ ಅವರನ್ನು ಎತ್ತರದ ಸ್ಥಾನಕ್ಕೆ ಏರಿಸಿರುವುದನ್ನು ನಾವೆಲ್ಲಾ ತಿಳಿದುಕೊಂಡವರು. ಮುಂದುವರಿಯುತ್ತಿರುವ ದೇಶದಲ್ಲಿ ಮುಸ್ಲಿಂ ಸಮಾಜ ಶೈಕ್ಷಣಿಕವಾಗಿ ಹಿಂದುಳಿದಿದೆ ಎಲ್ಲರಿಗೂ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಈ ಸ್ಪರ್ಧೆಗಳು ಸಮಾಜಕ್ಕೆ ಶೈಕ್ಷಣಿಕ ಪ್ರೇರಕವಾಗಿ ಮೂಡಿಬರಲಿ ಎಂದು ವಿಧಾನ ಪರಿಷತ್ ಶಾಸಕ‌ ಕೆ. ಹರೀಶ್ ಕುಮಾರ್ ಹೇಳಿದರು.

ಎಸ್ಸೆಸ್ಸೆಫ್ ಈಸ್ಟ್ ಜಿಲ್ಲಾ ಸಮಿತಿ ವತಿಯಿಂದ ಕಾಜೂರಿನಲ್ಲಿ ನಡೆಯುತ್ತಿರುವ ಜಿಲ್ಲಾ ಮಟ್ಟದ ಪ್ರತಿಭೋತ್ಸವ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿ ಮಾತನಾಡುತ್ತಿದ್ದರು.

ಕಾಜೂರು ಆಡಳಿತ ಸಮಿತಿ ಅಧ್ಯಕ್ಷ ಕೆ.ಯು ಇಬ್ರಾಹಿಂ ಸಭಾ ಕಾರ್ಯಕ್ರಮ ಉದ್ಘಾಟಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಎಸ್ಸೆಸ್ಸೆಫ್ ಈಸ್ಟ್ ಜಿಲ್ಲಾಧ್ಯಕ್ಷ ಜಿ.ಕೆ ಇಬ್ರಾಹಿಂ ಅಮ್ಜದಿ ಮಂಡೆಕೋಲು ವಹಿಸಿದ್ದರು. ಸಮಾರಂಭದಲ್ಲಿ  ಕೆ.ಯು ಮುಹಮ್ಮದ್ ಸಖಾಫಿ, ಪ್ರತಿಭೋತ್ಸವ ಸಮಿತಿ ಚೇರ್ಮೆನ್ ಕೆ.ಎಮ್ ಅಬೂಬಕ್ಕರ್ ಕುಕ್ಕಾವು ಶುಭ ಕೋರಿದರು.

ವೇದಿಕೆಯಲ್ಲಿ ಕಾಜೂರು ಆಡಳಿತ ಸಮಿತಿ ಪ್ರ.‌ಕಾರ್ಯದರ್ಶಿ ಜೆ.ಹೆಚ್ ಅಬೂಬಕ್ಕರ್ ಸಿದ್ದೀಕ್, ಕೋಶಾಧಿಕಾರಿ ಕೆ.ಎಮ್ ಕಮಾಲ್ ಕಾಜೂರು, ಪತ್ರಕರ್ತ ಅಶ್ರಫ್ ಆಲಿಕುಂಞಿ ಮುಂಡಾಜೆ, ಪ್ರತಿಭೋತ್ಸವ ಸಮಿತಿ ಕನ್ವೀನರ್ ಅಬ್ದುಲ್ ಅಝೀಝ್, ಕೋಶಾಧಿಕಾರಿ ಡಿ.ವೈ ಉಮರ್, ಎಸ್ಸೆಸ್ಸೆಫ್ ಕಾಜೂರು ಶಾಖೆ ಅಧ್ಯಕ್ಷ ಎಂ.ಕೆ ಸಿರಾಜ್, ಹಾಗೂ ಇತರರು ಉಪಸ್ಥಿತರಿದ್ದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಲಿ ತುರ್ಕಳಿಕೆ ಪ್ರಸ್ತಾವನೆಗೈದರು. ಕೋಶಾಧಿಕಾರಿ ಶರೀಫ್ ಬೆರ್ಕಳ ನಿರೂಪಿಸಿದರು. ಇಕ್ಬಾಲ್ ಮಾಚಾರು ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News